

ಮೈಸೂರು: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ, ಈ ಬಗ್ಗೆ ಶಾಸಕ ಪ್ರಿಯಾಂಕ್ ಖರ್ಗೆ ಹಗಲು ಕನಸು ಕಾಣಬೇಕಷ್ಟೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿರುಗೇಟು ನೀಡಿದರು.
‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಕಂದರೆ ಬಿಜೆಪಿ ಜಾರಿಗೆ ತಂದಿರುವ ಎಲ್ಲ ವಿವಾದಿತ ಕಾಯ್ದೆಗಳನ್ನು ಹಿಂಪಡೆಯಲಾಗುವುದು’ ಎಂಬ ಪ್ರಿಯಾಂಕ್ ರ್ಗೆ ಹೇಳಿಕೆಗೆ ಶುಕ್ರವಾರ ನಗರದಲ್ಲಿ ಪ್ರತಿಕ್ರಿಯಿಸಿದ ಸಚಿವರು, ಕಾಂಗ್ರೆಸ್ ಅಧಿಕಾರಕ್ಕೆ ಬರುವ ಯಾವುದೇ ಸಾಧ್ಯತೆ ಇಲ್ಲದೆ ಇರುವಾಗ ಅವರು ನಮ್ಮ ಸರ್ಕಾರದ ಅವಧಿಯಲ್ಲಿ ರೂಪಿಸಿದ ಕಾಯ್ದೆಗಳನ್ನು ಹಿಂಪಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ದಸರಾಕ್ಕೆ ಬೇಕಾದ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದೆ. ದಸರಾಕ್ಕೆ ಬೇಕಾದ ಅಗತ್ಯ ಅನುದಾನ ಸಹ ಬಿಡುಗಡೆಯಾಗಿದೆ. ದಸರಾಕ್ಕೆ ಅನುದಾನ ಬಿಡುಗಡೆಯಾಗಿಲ್ಲ ಎಂಬ ಮಾಹಿತಿ ಸರಿಯಲ್ಲ. ಈ ಕುರಿತು ಶನಿವಾರ ಸಭೆ ನಡೆಸಿ ಸಂಪೂರ್ಣ ಮಾಹಿತಿ ನೀಡುತ್ತೇನೆ ಎಂದರು.
ಯಶಸ್ವಿ ಯೋಜನೆಗೆ ಅ.2 ರಂದು ಮರು ಚಾಲನೆ ನೀಡಲು ಉದ್ದೇಶಿಸಲಾಗಿದೆ. ಯೋಜನೆಗೆ ಆರ್ಥಿಕ ಸಂಪನ್ಮೂಲದ ಕೊರತೆ ಇಲ್ಲ. ಯೋಜನೆ ಜಾರಿಗೆ ಸಂಬಂಧಿಸಿದಂತೆ ಸಹಕಾರ ಇಲಾಖೆ ಹಾಗೂ ವಿವಿಧ ಆಸ್ಪತ್ರೆಗಳೊಂದಿಗೆ ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ ಎಂದು ಹೇಳಿದರು.