ಸೋಮವಾರಪೇಟೆ -ಪಂಚ ದಶಮಾನೋತ್ಸವ ಸಂಪನ್ನ

24spt2
Published on

ಸೋಮವಾರಪೇಟೆ : ಇಲ್ಲಿನ ಶ್ರೀ ಬಸವೇಶ್ವರ ದೇವಾಲಯದ ವಿಮಾನಗೋಪುರ ಕಳಸ ಪ್ರತಿಷ್ಠಾಪನಾ ಪಂಚ ದಶಮಾನೋತ್ಸವ ಕಾರ್ಯಕ್ರಮ ಗುರುವಾರ ಮತ್ತು ಶುಕ್ರವಾರ ಶ್ರದ್ಧಾಭಕ್ತಿಯಿಂದ ನೆರವೇರಿತು. ಸ್ಥಳೀಯ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ, ಬಸವಾಪಟ್ಟಣದ ತೊಂಟದಾರ್ಯ ಸಂಸ್ಥಾನ ಮಠದ ಶ್ರೀ ಬಸವಲಿಂಗ ಶಿವಯೋಗಿ ಸ್ವಾಮೀಜಿ, ಶನಿವಾರಸಂತೆ ಸಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ ಮತ್ತು ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶುಕ್ರವಾರ ಮುಂಜಾನೆ 5ಕ್ಕೆ ಬ್ರಾಹ್ಮೀ ಮುಹೂರ್ತದಲ್ಲಿ ದೇವಾಲಯದ ಕಳಸ ಪ್ರತಿಷ್ಠಾಪನೆ, ವಿಶೇಷ ಪೂಜೆ, ವಿವಿಧ ಹೋಮ, ಹವನ ಮಾಡಲಾಯಿತು.

ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಡಾ. ಮಂತರ್ ಗೌಡ, ಮಾಜಿ ಸಚಿವ ಅಪ್ಪಚ್ಚು ರಂಜನ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ದೇವಾಲಯದ ಯಜಮಾನರಾದ ಬಿ.ಪಿ. ಶಿವಕುಮಾರ್, ಶೆಟ್ರು ಮೃತ್ಯುಂಜಯ, ಕಾರ್ಯದರ್ಶಿ ನಾಗರಾಜು ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net