ಸೋಮೇಶ್ವರ ಸ್ವಾಮಿ ರಥೋತ್ಸವ

KDR swami
ಖಂಡುಗದಹಳ್ಳಿ ಶ್ರೀ ಸೋಮೇಶ್ವರ ಸ್ವಾಮಿ ರಥೋತ್ಸವ ನಡೆಯಿತು.
Published on

ಕಡೂರು: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಖಂಡುಗದಹಳ್ಳಿ ಸೋಮೇಶ್ವರ ಸ್ವಾಮಿ ರಥೋತ್ಸವ ಶನಿವಾರ ಬೆಳಗ್ಗೆ ಸಂಭ್ರಮದಿಂದ ಜರುಗಿತು.

ಪ್ರತಿ ವರ್ಷದಂತೆ ಮಹಾಶಿವರಾತ್ರಿ ಹಬ್ಬದ ಮರುದಿನ ಸ್ವಾಮಿ ರಥೋತ್ಸವದಲ್ಲಿ ಬೆಳಗ್ಗೆ ಪ್ರಧಾನ ಅರ್ಚಕ ಶಿವು ನೇತೃತ್ವದಲ್ಲಿ ವಿಶೇಷ ಅಭಿಷೇಕ, ಪೂಜೆ ನಡೆಸಲಾಯಿತು. ನಂತರ ಸ್ವಾಮಿಯ ಉತ್ಸವಮೂರ್ತಿಯನ್ನು ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಿ ದೇವಸ್ಥಾನದ ಆವರಣದಲ್ಲಿ ರಥೋತ್ಸವ ನಡೆಸಲಾಯಿತು.
ಶಾಸಕ ಕೆ.ಎಸ್.ಆನಂದ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಸೋಮೇಶ್ವರ ಸ್ವಾಮಿ ದೇವಾಲಯದಲ್ಲಿ ಯಾತ್ರಿನಿವಾಸ, ಸಿಮೆಂಟ್ ರಸ್ತೆ ನಿರ್ಮಾಣ ಸೇರಿದಂತೆ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ದೊರಕಿಸಿಕೊಡುವುದಾಗಿ ಹೇಳಿದರು.
ಬಿಂಗಯ್ಯ ಭೃಂಗಿಗಳ ವಂಶಸ್ಥರಿಂದ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು. ಭಕ್ತರಿಗೆ ದೇವಾಲಯದಿಂದ ದಾಸೋಹ ವ್ಯವಸ್ಥೆ ಕಲ್ಪಿಸಲಾಯಿತು. ದೇವಾಲಯದ ಧರ್ಮದರ್ಶಿ ಕೆ.ಬಿ.ಸೋಮೇಶ್, ಸರಸ್ವತಿಪುರ ಗ್ರಾಪಂ ಅಧ್ಯಕ್ಷ ಕಂಸಾಗರ ಸೋಮಶೇಖರ್, ಯಳ್ಳಂಬಳಸೆ ಗ್ರಾಪಂ ಉಪಾಧ್ಯಕ್ಷೆ ಪುಷ್ಪಲತಾ ಸೋಮೇಶ್, ಪುರಸಭಾ ಸದಸ್ಯ ಈರಳ್ಳಿ ರಮೇಶ್, ಮಂಜು, ಸೋಮಶೇಖರ್, ಹರೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net