ಯಾವುದೋ ವಾಹನ ಡಿಕ್ಕಿ ಪಾದಚಾರಿ ಸಾವು

Crime Logo
Published on

ಹಾನಗಲ್ಲ: ಯಾವುದೋ ವಾಹನ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ತಾಲೂಕಿನ ಗೆಜ್ಜಿಹಳ್ಳಿ ಬಳಿ ಭಾನುವಾರ ನಡೆದಿದೆ.
ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಮಂಜಪ್ಪ ಚಂದ್ರಪ್ಪ ಹರಿಜನ ಮೃತ ವ್ಯಕ್ತಿ.
ಈತ ರಸ್ತೆ ಬದಿ ನಡೆದುಕೊಂಡು ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಯಾವುದೋ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net