ಯಾವುದೋ ವಾಹನ ಡಿಕ್ಕಿಯಾಗಿ ಬೈಕ್​ ಸವಾರ ಸಾವು

Crime Logo
Published on

ರಾಣೆಬೆನ್ನೂರ: ರಸ್ತೆ ಬದಿ ನಿಂತಿದ್ದ ಬೈಕ್​ ಸವಾರನಿಗೆ ಯಾವುದೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಟನೆ ತಾಲೂಕಿನ ಗುಡ್ಡದಬೇವಿನಹಳ್ಳಿಯಲ್ಲಿ ಬುಧವಾರ ನಡೆದಿದೆ.

ಬ್ಯಾಡಗಿ ತಾಲೂಕಿನ ಕೆರವಡಿ ಗ್ರಾಮದ ಪ್ರವಿಣ ಈರಪ್ಪ ಹಾವೇರಿ (30) ಮೃತ ಬೈಕ್​ ಸವಾರ.

ಈತ ರಸ್ತೆ ಬದಿ ನಿಂತುಕೊಂಡಿದ್ದ ಸಮಯದಲ್ಲಿ ಯಾವುದೋ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net