ಈದ್ ಮಿಲಾದ್ ಪ್ರಯುಕ್ತ ರಕ್ತದಾನ ಶಿಬಿರ

30spt3-
Published on

ಸೋಮವಾರಪೇಟೆ: ಇಲ್ಲಿನ ಕಾಗಡೀಕಟ್ಟೆ ಬದ್ರಿಯ ಜುಮ್ಮ ಮಸೀದಿ ಆವರಣದಲ್ಲಿ ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದಲ್ಲಿ ಈದ್ ಮಿಲಾದ್ ಪ್ರಯುಕ್ತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಇಂದೂದರ್ ಮಾತನಾಡಿ, ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು. ರಕ್ತಕ್ಕೆ ಪರ್ಯಾಯ ಯಾವುದೇ ವಸ್ತು ಇಲ್ಲ. ಆರೋಗ್ಯವಂತರು 60 ವರ್ಷಗಳ ತನಕ ರಕ್ತದಾನ ಮಾಡಬಹುದು. ರಕ್ತದಾನದಿಂದ ಆರೋಗ್ಯ ಉತ್ತಮವಾಗಿರುತ್ತದೆ. ಅನೇಕ ರೋಗಗಳಿಂದಲೂ ಮುಕ್ತವಾಗಬಹುದು. ದೇಹದಲ್ಲಿ ಹೊಸ ರಕ್ತ ಉತ್ಪಾದನೆಯಾಗಲಿದೆ ಎಂದು ಹೇಳಿದರು.

ಮಸೀದಿಯ ಅಧ್ಯಕ್ಷ ಖಾಲಿದ್, ಸಮುದಾಯ ಆರೋಗ್ಯಾಧಿಕಾರಿ ಧರಣೇಶ್ ಮತ್ತಿತರರು ಇದ್ದರು. 22 ಜನರು ರಕ್ತದಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net