ಅ.7, 8ರಂದು ಶ್ರೀ ದೊಡ್ಡವೀರ ರಾಜೇಂದ್ರ ಒಡೆಯರ್ ಕ್ರೀಡಾಕೂಟ

sports1
Published on

ಸೋಮವಾರಪೇಟೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಘಟಕ ಹಾಗೂ ಯುವ ಘಟಕದ ಸಹಯೋಗದಲ್ಲಿ ಹಾನಗಲ್ ಶ್ರೀ ಕುಮಾರ ಸ್ವಾಮೀಜಿ ಹಾಗೂ ಶ್ರೀ ಡಾ.ಶಿವಕುಮಾರ ಸ್ವಾಮೀಜಿ ಜಯಂತಿ ಅಂಗವಾಗಿ ಅ.7ಮತ್ತು 8ರಂದು ಶನಿವಾರಸಂತೆ ಜಯದೇವ ಜಾತ್ರಾ ಮೈದಾನದಲ್ಲಿ ಶ್ರೀ ದೊಡ್ಡವೀರ ರಾಜೇಂದ್ರ ಒಡೆಯರ್ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಯುವ ಘಟಕದ ಜಿಲ್ಲಾಧ್ಯಕ್ಷ ಮೋಕ್ಷಿಕ್‌ರಾಜ್ ಹೇಳಿದರು.

7ರಂದು ಬೆಳಗ್ಗೆ 8 ಗಂಟೆಗೆ ಶನಿವಾರಸಂತೆ ಕೆಆರ್‌ಸಿ ವೃತ್ತದಿಂದ ಕ್ರೀಡಾಜ್ಯೋತಿಯನ್ನು ಗುಡುಗಳಲೇ ಜಾತ್ರಾ ಮೈದಾನಕ್ಕೆ ತರಲಾಗುವುದು. ಶನಿವಾರಸಂತೆ ಮನೆಹಳ್ಳಿ ಮಠಾಧೀಶ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಕ್ರೀಡಾಜ್ಯೋತಿ ಬೆಳಗಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಶಾಸಕ ಬಿ.ವೈ.ವಿಜೇಂದ್ರ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಸಚ್ಚಿದಾನಂದಮೂರ್ತಿ, ರಾಜ್ಯ ಯುವ ಘಟಕದ ಅಧ್ಯಕ್ಷ ಜಿ.ಮನೋಹರ ಅಬ್ಬಿಗೆರೆ, ಜಿಲ್ಲಾಧ್ಯಕ್ಷ ಎಚ್.ವಿ.ಶಿವಪ್ಪ ಭಾಗವಹಿಸಲಿದ್ದಾರೆ.
ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ, ಪುರುಷರು ಮತ್ತು ಮಹಿಳೆಯರಿಗೆ ಹಗ್ಗ ಜಗ್ಗಾಟ, ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾಟಗಳು ನಡೆಯಲಿವೆ. ಕಾಲೇಜು ವಿದ್ಯಾರ್ಥಿಗಳಿಗೆ 100 ಮೀ. ಓಟ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾಸ್ಪರ್ಧೆಗಳು ನಡೆಯಲಿವೆ. ನಿಧಾನ ಬೈಕ್ ಚಾಲನೆ, ಭಾರದ ಗುಂಡು ಎಸೆತ, ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. ಹಿರಿಯರಿಗೂ ವಿವಿಧ ಸ್ಪರ್ಧೆಗಳು ನಡೆಯಲಿವೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಯುವ ಘಟಕದ ತಾಲೂಕು ಅಧ್ಯಕ್ಷ ಕೆ.ಪಿ.ಆದರ್ಶ್, ಜಿಲ್ಲಾ ಕಾರ್ಯದರ್ಶಿ ಎಸ್.ಸಿ.ನಿತನ್, ಸದಸ್ಯರಾದ ಸಿ.ಎಲ್.ಭರತ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net