ಕೇರಳದ ದಂಪತಿಗೆ ದತ್ತು ಮಗುವಾಗಿ ಗದುಗಿನ ಹೆಣ್ಣು ಮಗು ಹಸ್ತಾಂತರ

10GDG09
Published on

ವಿಜಯವಾಣಿ ಸುದ್ದಿಜಾಲ ಗದಗ
ಮಗುವನ್ನು ದತ್ತು ಪಡೆದ ದಂಪತಿಗಳು ಮಗುವಿಗೆ ಒಳ್ಳೆ ಸಂಸ್ಕಾರ ನೀಡಿ ಆದರ್ಶ ವ್ಯಕ್ತಿಯನ್ನಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್​ ಹೇಳಿದರು.
ನಗರದ ಸೇವಾಭಾರತಿ ಟ್ರಸ್ಟ್​ ನ ಅಮೂಲ್ಯ ವಿಶೇಷ ದತ್ತು ಸ್ವೀಕಾರ ಸಂಸ್ಥೆಯಲ್ಲಿ ಪೋಷಣೆಗೊಂಡ ಮಗುವನ್ನು ಸೋಮವಾರ ಕೇರಳದ ಮಕ್ಕಳಿಲ್ಲದ ದಂಪತಿಗೆ ಕಾನೂನಿನಡಿ ಮಗುವನ್ನು ಹಸ್ತಾಂತರಿಸಿ ಮಾತನಾಡಿದರು.
ಬೇರೆ ರೀತಿಯ ಸಂಬಂಧಗಳಿಂದಾಗಿ ಜನಿಸುವ, ಹೆತ್ತವರಿಗೆ ಬೇಡವಾಗುವ ಮಕ್ಕಳ ಸಂಖ್ಯೆ ಇಳಿಮುಖವಾಗಿ ಶೂನ್ಯವಾಗಬೇಕು. ಆದರ್ಶ ಸಮಾಜದಲ್ಲಿ ಉತ್ತಮ ಸಂಸ್ಕಾರ, ಸಂಸತಿ ಪಡೆದ ದಂಪತಿಗಳಿಂದ ಆದರ್ಶ ಮಕ್ಕಳು ಕುಟುಂಬ, ಸಮಾಜವನ್ನು ಬೆಳಗುವಂತಾಗಲಿ ಎಂದರು.
ಜಿಲ್ಲಾ ಚೇಂಬರ್​ ಆ್​ ಕಾಮರ್ಸ ಅಧ್ಯ ಈಶಣ್ಣ ಮುನವಳ್ಳಿ ಮಾತನಾಡಿ, ಇದು ಮನ ಕಲಕುವ, ಮನ, ಮಾನವೀಯತೆ ಕಟ್ಟುವ ಸನ್ನಿವೇಶ. ಎಲ್ಲೋ ಜನ್ಮ ತಾಳಿದ ಮಗು ಎಲ್ಲೋ ಜೀವನ ರೂಪಿಸಿಕೊಳ್ಳುವಂತದ್ದು. ತಂದೆ ತಾಯಿಗೆ ಹಾತೊರೆಯುವ ಮಗು ಒಂದೆಡೆಯಾದರೆ ಮಕ್ಕಳಿಲ್ಲದೇ ಚಿಂತೆಯಲ್ಲಿ ಕೊರಗುವ ದಂಪತಿ ಇನ್ನೊಂದೆಡೆ. ಮೂರು ಜೀವಾತ್ಮಗಳನ್ನು ಒಂದೆಡೆ ಬೇಸುಗೆಗೊಳಿಸುವ ಈ ಕಾರ್ಯ ನೀಜಕ್ಕೂ ಮಾನಸಿಕ ನೆಮ್ಮದಿ ನೀಡುವಂತಹ ಕಾರ್ಯಕ್ರಮ ಎಂದರು.
ಜಿಲ್ಲಾ ಮಕ್ಕಳ ರಣಾಧಿಕಾರಿ ರಫೀಕಾ ಹಳ್ಳೂರ, ಉಮಾ ಈಶಣ್ಣ ಮುನವಳ್ಳಿ, ಮಂಜುನಾಥ ಚನ್ನಪ್ಪನವರ, ಮಲ್ಲಿಕಾರ್ಜುನ ಬೆಲ್ಲದ, ಚೇತನ್​ ಮೇರವಾಡೆ, ನಾಗವೇಣಿ ಕಟ್ಟಿಮನಿ, ರಾಜೇಶ ಖಟವಟೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net