ಬುದ್ದಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಂದ ಮಗ

crime
Published on

ಹುಬ್ಬಳ್ಳಿ: ಕುಡಿಯೋದು ಬಿಡು ಎಂದು ಬುದ್ದಿವಾದ ಹೇಳಿದ ತಂದೆಯನ್ನೇ ಪುತ್ರ ಹೊಡೆದು ಕೊಲೆ ಮಾಡಿರುವ ಘಟನೆ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ.

ನಾಗರಾಜ ಮೈಸೂರು (77) ಕೊಲೆಯಾದ ವ್ಯಕ್ತಿ. ಮಗ ಅಣ್ಣಪ್ಪ ಮೈಸೂರು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಗ ಅಣ್ಣಪ್ಪನಿಗೆ ನ. 19ರಂದು ರಾತ್ರಿ ಬುದ್ದಿವಾದ ಹೇಳಿದ್ದಾರೆ. ಇದರಿಂದ ಕೋಪಗೊಂಡ ಮಗ ತಂದೆಗೆ ಮನೆಯಲ್ಲಿ ಮನಬಂದತೆ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ನಾಗರಾಜನನ್ನು ಕೆಎಂಸಿಆರ್‌ಐಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಮೃತಪಟ್ಟಿದ್ದಾರೆ. ಮಗ ಅಣ್ಣಪ್ಪನ ವಿರುದ್ಧ ಹಳೇಹುಬ್ಬಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net