ಮಗನ ಬೈಕ್ ಮೇಲಿಂದ ಬಿದ್ದು ಮಹಿಳೆ ಸಾವು

Bike Accident_2
Published on

ಸವಣೂರ: ಬೈಕ್ ಮೇಲಿಂದ ಬಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಸದೆ ಮೃತಪಟ್ಟ ಘಟನೆ ತಾಲೂಕಿನ ಕುಣಿಮೆಳ್ಳಿಹಳ್ಳಿಯ ಎನ್‌ಎಚ್-48ರ ಸೇತುವೆ ಮೇಲೆ ಶುಕ್ರವಾರ ನಡೆದಿದೆ.
ಶಿಗ್ಗಾಂವಿ ತಾಲೂಕಿನ ಕೋಣನಕೇರಿ ಗ್ರಾಮದ ಕಮಲವ್ವ ಕೃಷ್ಣಪ್ಪ ಮಾಸನಕಟ್ಟಿ ಮೃತ ಮಹಿಳೆ.
ಇವರು ತಮ್ಮ ಮಗನ ಬೈಕ್ ಮೇಲೆ ಹಿಂದೆ ಕುಳಿತು ಹಾವೇರಿ ಕಡೆಯಿಂದ ಬಂಕಾಪುರ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ದಾರಿ ಮಧ್ಯೆ ಬೈಕ್ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net