

ವಿಜಯವಾಣಿ ಸುದ್ದಿಜಾಲ ಚಿತ್ರದುರ್ಗ
ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ ಅ.28ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ನನ್ನ ನಾಡು ನನ್ನ ಹಾಡು ಘೋಷವಾಕ್ಯದೊಂ ದಿಗೆ ಕೋಟಿ ಕಂಠಗಳಲ್ಲಿ ಗೀತೆ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4 ಲಕ್ಷ ಜನರ ಗೀತ ಗಾಯನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಡಿಸಿ ಕವಿತಾ ಎಸ್ ಮನ್ನಿಕೇರಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಈ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ,ಡಿಸಿ ಬಳಿ,ಕೋಟೆ,ಸರ್ಕಾರಿ ಬಾಲಕ ಹಾ ಗೂ ಬಾಲಕಿಯರ ಪದವಿ ಪೂರ್ವ ಕಾಲೇಜು,ಸರ್ಕಾರಿ ಕಲಾ ಕಾಲೇಜು,ಎಸ್.ಆರ್.ಎಸ್. ಕಾಲೇಜು,ಎಸ್.ಜೆ.ಎಂ.ಐ.ಟಿ ಕಾಲೇಜು, ಅರವಿಂದ ಗಾರ್ಮೆಂಟ್ಸ್,ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರ ಸ್ವಾಮಿ ದೇವಸ್ಥಾನ,ಜಿಆರ್‌ಹಳ್ಳಿಯ ದಾವಣಗೆರೆ ವಿವಿ ಸ್ನಾತಕೋತ್ತರ ಅಧ್ಯಯನ ಕೇಂದ್ರ,ಹೊಸದುರ್ಗ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು,ಎಸ್.ನಿಜಲಿಂಗಪ್ಪ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ,ಮೊಳಕಾಲ್ಮೂರು, ಹಿರಿಯೂರು,ಹೊಳಲ್ಕೆರೆ,ಚಳ್ಳಕೆರೆ ಹಾಗೂ ತಳುಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ರಾಷ್ಟ್ರಕವಿ ಕುವೆಂಪು ರಚಿತ ನಾಡಗೀತೆ ಜೈ ಭಾರತ ಜನನಿಯ ತನುಜಾತೆ...,ಬಾರಿಸು ಕನ್ನಡ ಡಿಂಡಿಮವ...,ಹುಯಿಲಗೋಳ ನಾ ರಾಯಣರಾಯರ ಉದಯವಾಗಲಿ ಚಲುವ ಕನ್ನಡ ನಾಡು...,ಡಾ.ಡಿ.ಎಸ್.ಕರ್ಕಿಯವರ ಹಚ್ಚೇವು ಕನ್ನಡದ ದೀಪ...,ನಾಡೋಜ ಡಾ.ಚೆನ್ನವೀರ ಕಣವಿಯವರ ವಿಶ್ವವಿನೂತನ ವಿದ್ಯಾಚೇತನ...,ಡಾ.ಹಂಸಲೇಖ ಅವರ ಸಾಹಿತ್ಯ ಹಾಗೂ ಸಂಗೀತದ ಚಿತ್ರಗೀತೆ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು..ಹಾಡುಗಳನ್ನು ಸಾಮೂಹಿಕವಾಗಿ ಹಾಡಲಾಗುವುದು. ಪ್ರತಿ ಸ್ಥಳದಲ್ಲಿ 1000ಕ್ಕಿಂತ ಹೆಚ್ಚು ಜನರು ಪಾಲ್ಗೊಳ್ಳ ಲಿದ್ದಾರೆ.
ಹೆಸರು ನೋಂದಾಯಿಸಿ
ಸಾಮೂಹಿಕ ಗೀತ ಗಾಯನದಲ್ಲಿ ಪಾಲ್ಗೊಳ್ಳುವವರು ವೆಬ್‌ಸೈಟ್ ಠಿಠಿ://ಚ್ಞ್ಞಜ್ಟಿಜಿ. ಚ್ಟ್ಞಠಿ.ಜಟ.ಜ್ಞಿ/ ಜ/ಟ್ಠಚ್ಝಿಜ್ಚಿ ಮೂಲಕ ಅ.28ರವರೆಗೆ ಹೆಸರು ನೋಂದಾಯಿಸಬಹುದು. ಸಾರ್ವಜನಿಕರು,ಶಾಲಾ,ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಡಿಸಿ ಮನವಿ ಮಾಡಿದರು.
ಶಾಲಾ ಕಾಲೇಜುಗಳಲ್ಲಿ ಗಾಯನದ ತರಬೇತಿ ನೀಡಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ತಿಳಿಸಿದರು. ಎಡಿಸಿ ಇ.ಬಾಲಕೃಷ್ಣ,ಜಿ.ಪಂ.ಉಪಕಾರ್ಯದರ್ಶಿ ರಂಗಸ್ವಾಮಿ,ಉಪವಿಭಾಗಾಧಿಕಾರಿ ಚಂದ್ರಯ್ಯ, ಡಿವೈ ಎಸ್‌ಪಿ ತಿಪ್ಪೇಸ್ವಾಮಿ ಮತ್ತಿತರ ಅಧಿಕಾರಿಗಳು,ರಂಗಕರ್ಮಿ ಕೆ.ಪಿ.ಗಣೇಶಯ್ಯ ಇತರರು ಇದ್ದರು.
ಅದ್ಧೂರಿ ರಾಜ್ಯೋತ್ಸವ
ನವೆಂಬರ್ 1ರಂದು ಜಿಲ್ಲಾ ಕೇಂದ್ರದಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಡಿಸಿ ಹೇಳಿದರು. ಅಂದು ಬೆಳಗ್ಗೆ 7.30ಕ್ಕೆ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ,ಸಮಾರಂಭದ ಪೊಲೀಸ್ ಕವಾಯತು ಮೈದಾನದವರೆಗೆ ಸಾಗಲಿದೆ. 9 ಗಂಟೆಗೆ ಅಲ್ಲಿ ರಾಜ್ಯೋತ್ಸವ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಗಣ್ಯಮಾನ್ಯರು ಉಪಸ್ಥಿರಿರುತ್ತಾರೆ.
ಶಾಲಾ ಕಾಲೇಜು ಹಾಗೂ ಹಾಸ್ಟೆಲ್‌ಗಳ ವಿದ್ಯಾರ್ಥಿಗಳಿಂದ ಅಂದು ಬೆಳಗ್ಗೆ ಕವಾಯತು ಮೈದಾನ ಹಾಗೂ ಸಂಜೆ ತ.ರಾ.ಸು. ರಂಗಮಂದಿರದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು. ಮಹತ್ವದ ಪೂರ್ವಭಾವಿ ಸಭೆಗೆ ಗೈರು ಹಾಜರಾಗಿದ್ದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲು ಡಿಸಿ ಸೂಚಿಸಿದರು.
ಜಿಲ್ಲಾ ಪ್ರಶಸ್ತಿಗೆ ಅರ್ಜಿ
ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವವರನ್ನು ಆಯ್ಕೆ ಮಾಡಿ,ನ.1ರಂದು ಚಿತ್ರ ದುರ್ಗದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ರಾಜ್ಯೋತ್ಸವ ಸಮಾರಂಭದ ಸಂದರ್ಭದಲ್ಲಿ ಸನ್ಮಾನಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಆಸಕ್ತರು ಅರ್ಜಿಯನ್ನು ಉಪವಿಭಾಗಾಧಿಕಾರಿಹಾಗೂ ಅಧ್ಯಕ್ಷರು, ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಆಯ್ಕೆ ಸಮಿತಿ,ಚಿತ್ರದುರ್ಗ ಇವರಿಗೆ ಅ.25ರೊಳಗೆ ಸಲ್ಲಿಸುವಂತೆ ಡಿಸಿ ತಿಳಿಸಿದ್ದಾರೆ.
----