ಸೋನಿಯಾ ವಿಚಾರಣೆ ಖಂಡಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ

Cong_Protest
Published on

ತುಮಕೂರು

ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ಮೂಲಕ ಕೇಂದ್ರ ಸರ್ಕಾರ ಕಿರುಕುಳ ನೀಡುತ್ತಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಜಿಲ್ಲಾಧ್ಯಕ್ಷ ಆರ್.ರಾಮಕೃಷ್ಣ ನೇತೃತ್ವದಲ್ಲಿ ಇಡಿ ದುರ್ಬಳಕೆ ಬಗ್ಗೆ ಪ್ಲೇಕಾರ್ಡ್‌ಗಳನ್ನು ಹಿಡಿದು ಪಕ್ಷದ ಪದಾಧಿಕಾರಿಗಳು ಮೌನ ಪ್ರತಿಭಟನೆ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ರಾಮಕೃಷ್ಣ, ಬೆಲೆ ಹೆಚ್ಚಳ, ನಿರುದ್ಯೋಗ ಸಮಸ್ಯೆ, ಆರ್ಥಿಕ ಕುಸಿತದಂತಹ ವಿಷಯಗಳಿಂದ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಬಿಜೆಪಿ ನೇತೃತ್ವದ ಕೇಂದ್ರ ರ್ಸಕಾರ ಇಡಿ ಮೂಲಕ ಸೋನಿಯಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದರು.

ಅನಗತ್ಯ ಕಿರುಕುಳ: ಕಳೆದ ಎರಡು ದಿನಗಳಿಂದ ಸೋನಿಯಗಾಂಧಿ ಅವರನ್ನು ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು, ಯಾವುದೇ ಮಾಹಿತಿ ಇಲ್ಲ. ಪ್ರಜಾಸತ್ತಾತ್ಮಕ ವಿಚಾರಣೆಗೆ ನಮ್ಮ ತಗಾದೆ ಇಲ್ಲ. ಅನಗತ್ಯ ಕಿರುಕುಳ ನೀಡುತ್ತಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಮಾಜಿ ಶಾಸಕ ಎಸ್.ರಫೀಕ್ ಅಹ್ಮದ್ ಹರಿಹಾಯ್ದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಹೆಚ್.ಸಿ.ಹನುಮಂತಯ್ಯ, ಮಂಜುನಾಥ್, ಆಟೋರಾಜು, ಶಿವಾಜಿ, ಶ್ರೀನಿವಾಸ ಕುಮಾರ್, ನಟರಾಜಶೆಟ್ಟಿ, ಸುವರ್ಣಾದೇವಿ, ಕೃಷ್ಣಪ್ಪ, ಡಾ.ಇಂತಿಯಾಜ್ ಅಹ್ಮದ್, ಸಂಜೀವಕುಮಾರ್, ಮರಿಚನ್ನಮ್ಮ, ಕೆಂಪಣ್ಣ, ಕುಮಾರಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net