

ಮೈಸೂರು: ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಸೋನು ಗ್ಲೋಬಲ್ ಕ್ರಿಯೇಟರ್ಸ್ ಟ್ರಸ್ಟ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಮಹಿಳೆಯರಿಗೆ ಸಾಂತ್ವಾನ, ಆರ್ಥಿಕ ಸಬಲತೆ, ವೃತ್ತಿ ಹಾಗೂ ಸರ್ಕಾರದ ಸೌಲಭ್ಯಗಳ ಬಗ್ಗೆ ತಿಳುವಳಿಕೆ, ತರಬೇತಿ ನೀಡುವ ಉದ್ದೇಶವನ್ನು ಟ್ರಸ್ಟ್ ಹೊಂದಿದ್ದು, ಈ ಕಾರ್ಯದಲ್ಲಿ ಯಶಸ್ಸು ಸಿಗಲಿ ಎಂದು ಹಾರೈಸಿದರು.
ಮಾತನಾಡುವ ಗೊಂಬೆ ಖ್ಯಾತಿಯ ಕಲಾವಿದೆ ಸುಮಾ ರಾಜ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಟ್ರಸ್ಟ್ ಕಾರ್ಯದರ್ಶಿ ಎಚ್.ವಿ. ಸುಬ್ಬರಾವ್ ಇದ್ದರು.