ಶೀಘ್ರ ಕೊಳಗೇರಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ

20 vikram 6
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಸಾವಿರಕ್ಕೂ ಹೆಚ್ಚಿನ ಕೊಳಗೇರಿ ನಿವಾಸಿಗಳಿಗೆ ಮುಖ್ಯಮಂತ್ರಿಗಳಿಂದ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮವನ್ನು ಏಪ್ರಿಲ್​ನಲ್ಲಿ ಹುಬ್ಬಳ್ಳಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾಮಗಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಶಾಸಕ ಎನ್​.ಎಚ್​.ಕೋನರೆಡ್ಡಿ ಅವರು ನವಲಗುಂದ ಮತ್ತು ಅಣ್ಣಿಗೇರಿ ಪಟ್ಟಣದಲ್ಲಿ ಕೊಳಗೇರಿ ನಿವಾಸಿಗಳಿಗೆ ರಾಜ್ಯಕ್ಕೆ ಮಾದರಿ ಆಗುವ ಮನೆಗಳನ್ನು ಕಟ್ಟಿಸುತ್ತಿದ್ದಾರೆ. ಈ ಮಾದರಿಗಳನ್ನು ರಾಜ್ಯದ ಇತರ ನಗರಗಳ ಕೊಳಗೇರಿಗಳಲ್ಲಿ ನಿರ್ಮಿಸುವ ಮನೆಗಳಿಗೆ ಬಳಸಲಾಗುವುದು ಎಂದರು.

ಜಿಲ್ಲೆಯಲ್ಲಿ 138 ಘೋಷಿತ ಕೊಳಚೆ ಪ್ರದೇಶಗಳಿವೆ. ಜಿಲ್ಲೆಯ ನಗರಗಳಲ್ಲಿ ಪ್ರಧಾನಮಂತ್ರಿ ಆವಾಸ್​ ಯೋಜನೆಯಡಿ ಸುಮಾರು 7,692 ಮನೆಗಳು ಮಂಜೂರಾಗಿವೆ. ಅದರಲ್ಲಿ 2,296 ಮನೆಗಳು ಪೂರ್ಣಗೊಂಡಿವೆ. 3,157 ಮನೆಗಳು ಪ್ರಗತಿಯ ಹಂತದಲ್ಲಿವೆ. 2239 ಮನೆಗಳನ್ನು ಆರಂಭಿಸಬೇಕಿದೆ. ವರ್ಷಾಂತ್ಯಕೆ ಎಲ್ಲ ಮನೆಗಳನ್ನು ಪೂರ್ಣಗೊಳಿಸುವ ಗುರಿ ಇದೆ ಎಂದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿದರು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಸದಸ್ಯರಾದ ವಿನಾಯಕ ಜಿ., ರಾಮಕೃಷ್ಣ ರೊಳ್ಳಿ, ಮಹಮ್ಮದ ರಷಿದ್​, ಆಯುಕ್ತ ಡಾ. ಅಶೋಕ ಡಿ.ಆರ್​., ಮುಖ್ಯ ಅಭಿಯಂತರ ಎಚ್​.ಪಿ.ಸುಧೀರ, ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್​ ದೇಸಾಯಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್​, ತಹಸೀಲ್ದಾರರಾದ ಡಿ.ಎಚ್​.ಹೂಗಾರ, ಜೆ.ಬಿ. ಮಜ್ಜಗಿ, ಕೆ.ಆರ್​.ಪಾಟೀಲ, ಭೂ ದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ಹಳ್ಳೂರ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net