ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆ ಕೋರುವೆ: ಟಿ.ಡಿ.ಮೇಘರಾಜ್

bjp dist president T.D. Megharaj
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್
Published on

ಶಿವಮೊಗ್ಗ: ಸಾಗರ ನಗರಸಭೆ ಸದಸ್ಯೆ ಲಲಿತಮ್ಮ ಅವರಿಗೆ ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆಯಾಚಿಸುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ, ನಗರಸಭೆ ಸದಸ್ಯ ಟಿ.ಡಿ.ಮೇಘರಾಜ್ ಹೇಳಿದರು.

ಲಲಿತಮ್ಮ ಅವರ ಬಗ್ಗೆ ನನಗೆ ಯಾವುದೇ ಪೂರ್ವಾಗ್ರಹ ಇಲ್ಲ. ಜಾತಿ ಹೆಸರಿಡಿದು ನಿಂದಿಸಿಲ್ಲ. ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಮೀಸಲಾತಿಗೆ ಸಂಬಂಧಿಸಿ ಸ್ವಹಿತಾಸಕ್ತಿಗಾಗಿ ಹೈಕೋರ್ಟ್ ಮೆಟ್ಟಿಲೇರಿರುವುದು ಸರಿಯಲ್ಲ. ಹಾಗಾಗಿ ಅವರು ನಗರಸಭೆ ಸಾಮಾನ್ಯ ಸಭೆಯಲ್ಲಿ ಭಾಗವಹಿಸುವ, ಮತ ಹಾಕುವ ಅಧಿಕಾರ ಇರುವುದಿಲ್ಲ. ಇದನ್ನು ನಾನು ಪ್ರಶ್ನೆ ಮಾಡಿದ್ದೇನೆಯೇ ಹೊರತು ಬೇರೆನೂ ಇಲ್ಲ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದು, ಅವರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net