

ಹಿರಿಯೂರು: ಸಾರ್ವಜನಿಕರು ನಿತ್ಯ ಕಸವನ್ನು ನಿಗದಿಪಡಿಸಿದ ಸ್ಥಳದಲ್ಲಿ ಅಥವಾ ಸ್ಥಳೀಯ ಸಂಸ್ಥೆಗಳ ಕಸ ಸಂಗ್ರಹ ವಾಹನದಲ್ಲಿಯೇ ಹಾಕಬೇಕು ಎಂದು ನಗರಸಭೆ ಪೌರಾಯುಕ್ತ ಮಹಂತೇಶ್ ತಿಳಿಸಿದರು.
ನಗರದಲ್ಲಿ ಭಾನುವಾರ ಆಯೋಜಿಸಿದ್ದ ಅಭಿಯಾನದಲ್ಲಿ ಮಾತನಾಡಿ, ಪ್ಲಾಸ್ಟಿಕ್ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಕೋರಿದರು.
ಆರೋಗ್ಯ ಹಿತದೃಷ್ಟಿಯಿಂದ ನಮ್ಮ ಸುತ್ತಮುತ್ತಲ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ಪ್ರತಿಯೊಬ್ಬರೂ ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದರು.