ಸೌಜನ್ಯ ಕೊಲೆ ಆರೋಪಿ ಹುಚ್ಚನಾಗಲು ಪ್ರಾರ್ಥಿಸಿ ಉರುಳು ಸೇವೆ

udp-27-olakadu
Published on

ಉಡುಪಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿ ಕೊರಗಜ್ಜ ಕೊರಗಜ್ಜ ಎಂದು ರಸ್ತೆಯಲ್ಲಿ ಹುಚ್ಚನಂತೆ ಅಲೆದಾಡಲಿ ಅಂತ ಪ್ರಾರ್ಥಿಸಿ ಕರಾವಳಿಯ ಕಾರಣಿಕ ದೈವ ಕೊರಗಜ್ಜನಿಗೆ ಸಾಮಾಜಿಕ ಕಾರ್ಯಕರ್ತರೊಬ್ಬರು ಉರುಳು ಸೇವೆಯ ಮೂಲಕ ಪೂಜೆ ಪ್ರಾರ್ಥನೆ ಸಲ್ಲಿಸಿದ್ದಾರೆ.

ಭಾನುವಾರ ಸರ್ವಿಸ್​ ಬಸ್​ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಕೊರಗಜ್ಜ ದೈವಸ್ಥಾನದಲ್ಲಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರಿಂದ ವಿಶೇಷ ಉರುಳು ಸೇವೆ ನಡೆಯಿತು. ಮೊದಲು ಪ್ರಾರ್ಥನೆ ಸಲ್ಲಿಸಿದ ನಿತ್ಯಾನಂದ ಒಳಕಾಡು, ಬಳಿಕ ಸೌಜನ್ಯಾಳ ಭಾವ ಚಿತ್ರ ಹಿಡಿದು ಉರುಳು ಸೇವೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೌಜನ್ಯಾಗೆ ನ್ಯಾಯ ಸಿಗ್ಬೇಕು ಎನ್ನುವ ನಿಟ್ಟಿನಲ್ಲಿ ಅನೇಕ ಪ್ರತಿಭಟನೆಗಳು ನಡೀತಾ ಇದೆ. ಅದರೆ ಸರ್ಕಾರ ಈ ಬಗ್ಗೆ ಮೌನ ವಹಿಸಿದೆ. ಸೌಜನ್ಯ ಅತ್ಯಾಚಾರ ಮಾಡಿದ ಆರೋಪಿಗೆ ಕೊರಗಜ್ಜನೇ ಶಿಕ್ಷೆ ಕೊಡಬೇಕು. ಇದಕ್ಕಾಗಿ ಉರುಳು ಸೇವೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದೇನೆ. ಆರೋಪಿ ಯಾರೆಂಬುದು ಪತ್ತೆ ಆಗಬೇಕು. ಆರೋಪಿಯೇ ಮುಂದೆ ಬಂದು ತಪ್ಪೊಪ್ಪಿಕೊಳ್ಳಬೇಕು. ಇಲ್ಲವಾದರೆ ಕೊರಗಜ್ಜ ಕೊರಗಜ್ಜ ಎಂದು ಹುಚ್ಚನಂತೆ ತಿರುಗಾಡುವಂತೆ ಪ್ರಾರ್ಥಿಸಿದ್ದೇನೆ ಎಂದರು. ವಿಶೇಷ ಉರುಳು ಸೇವೆಗೆ ಸ್ಥಳಿಯ ರಿಕ್ಷಾ ಚಾಲಕರು, ಸ್ಥಳಿಯ ನಾಗರಿಕರು ಸಾಥ್​ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net