ಸೌಮ್ಯಕೇಶವಸ್ವಾಮಿ ಬ್ರಹ್ಮರಥೋತ್ಸವ

 ನಾಗಮಂಗಲ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಸೌಮ್ಯಕೇಶವಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
ನಾಗಮಂಗಲ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಸೌಮ್ಯಕೇಶವಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
Published on

ನಾಗಮಂಗಲ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಸೌಮ್ಯಕೇಶವಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

ಬ್ರಹ್ಮರಥೋತ್ಸವ ಅಂಗವಾಗಿ ಐದು ದಿನಗಳಿಂದ ಶ್ರೀ ಸೌಮ್ಯಕೇಶವಸ್ವಾಮಿಗೆ ಅಂಕುರಾರ್ಪಣೆ, ಗರುಡ ಪ್ರತಿಷ್ಠೆ, ಅಭಿಷೇಕ ಶೇಷವಾಹನೋತ್ಸವ, ಗಜವಾಹನೋತ್ಸವ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು.

ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿದಂತೆ ನಾಡಿನ ವಿವಿಧೆಡೆಯಿಂದ ಅಪಾರ ಸಂಖ್ಯೆ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸೌಮ್ಯಕೇಶವನಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನ 1.30ರ ವೇಳೆಗೆ ಮಂಗಳವಾದ್ಯದೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ದೇವಾಲಯದ ಆವರಣದಲ್ಲಿ ಮೆರವಣಿಗೆಯಲ್ಲಿ ಸಾಗಿದ ರಥಕ್ಕೆ ಭಕ್ತರು ನಮಿಸಿದರು. ನಂತರ ನಡೆದ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net