ಶಾಮಿಯಾನ, ಧ್ವನಿ-ಬೆಳಕು ಉದ್ಯಮ ನೌಕರರಿಗೆ ಕಾರ್ಮಿಕ ಇಲಾಖೆ ಸವಲತ್ತು

udp-shamiyana 1
Published on


ಉಡುಪಿ: ಉದ್ಯಮದಲ್ಲಿ ನೋವು ಮತ್ತು ನಲಿವು ಎರಡೂ ಸಮಾನವಾಗಿರುತ್ತದೆ. ಶಾಮಿಯಾನ, ಧ್ವನಿ-ಬೆಳಕು ಉದ್ಯಮದಲ್ಲಿ ತೊಡಗಿರುವ ನೌಕರರನ್ನು ಕಾರ್ಮಿಕ ಇಲಾಖಾ ವ್ಯಾಪ್ತಿಗೆ ಸೇರಿಸಬೇಕು ಎಂಬ ಬೇಡಿಕೆ ಅತ್ಯಂತ ಸಮಂಜಸವಾಗಿದೆ. ಈ ಬಗ್ಗೆ ಕಾರ್ಮಿಕರ ಸಚಿವರೊಂದಿಗೆ ಮಾತನಾಡಿ ಕ್ರಮಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರಕಂಡುಕೊಳ್ಳಲಾಗುವುದು ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.

ಭಾನುವಾರ ಬೀಡಿನ ಗುಡ್ಡೆಯ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯ ಶಾಮಿಯಾನ, ಡೆಕೋರೇಶನ್, ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘ ಗಂಗಾವತಿ, ಆಲ್ ಇಂಡಿಯಾ ಟೆಂಟ್ ಆ್ಯಂಡ್ ಡೆಕೋರೇಟರ್ಸ್ ವೆಲ್ಫೇರ್ ಅಸೋಸಿಯೇಶನ್ ನವದೆಹಲಿ ಹಾಗೂ ಧ್ವನಿ ಬೆಳಕು ಸಂಯೋಜಕರ ಸಂಘಟನೆ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ 2ನೇ ಮಹಾ ಅಧಿವೇಶನ ಹಾಗೂ ಉಡುಪಿ ಜಿಲ್ಲಾ ಸಂಘ ದಶಮಾನೋತ್ಸವ ‘ಉಡುಪಿ ವೈಭವ’ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಣಿಯೂರು ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಕಲಿಯುಗದಲ್ಲಿ ಸಂಘಟನೆಗೆ ಮಾತ್ರ ಶಕ್ತಿ ಇರುತ್ತದೆ. ಹೀಗಾಗಿ ಏಕತಾ ಭಾವನೆಯಿಂದ ಕಾರ್ಯನಿರ್ವಹಿಸಿದಾಗ ಸಂಘಟನೆಗೆ ಯಶಸ್ಸು ಪ್ರಾಪ್ತಿಯಾಗುತ್ತದೆ ಎಂದು ಹೇಳಿದರು.

ಶಾಸಕ ಲಾಲಾಜಿ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನೀಲಾವರ ಮಹಿಷ ಮರ್ಧಿನಿ ದೇವಸ್ಥಾನದ ಅಧ್ಯಕ್ಷ ರಘುರಾಮ ಮಧ್ಯಸ್ಥ, ಮಂದಾರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಧನಂಜಯ ಶೆಟ್ಟಿ, ದಶಮಾನೋತ್ಸವ ಸಮಿತಿ ಅಧ್ಯಕ್ಷ ಶಿವರಾಜ್ ಮಲ್ಲಾರ್, ಕಚ್ಚೂರು ಮಾಲ್ತಿದೇವಿ ದೇವಸ್ಥಾನ ಆಡಳಿತ ಮೊಕ್ತೇಸರ ಗೋಕುಲ್‌ದಾಸ್ ಬಾರ್ಕೂರು, ಕೆಎಸ್‌ಎಸ್‌ಡಿಎಸ್ ರಾಜ್ಯಾಧ್ಯಕ್ಷ ಶಿವಕುಮಾರ್ ಹಿರೇಮಠ, ಎಐಟಿಡಿಡಬ್ಲೂೃಎ ಅಧ್ಯಕ್ಷ ರವಿ ಜಿಂದಾಲ್, ಪ್ರಧಾನ ಕಾರ್ಯದರ್ಶಿ ಅನಿಲ್ ರಾವ್, ಕೆಎಸ್‌ಎಸ್‌ಡಿಎಸ್ ಸಂಸ್ಥಾಪಕ ಅಧ್ಯಕ್ಷ ಮಹಬೂಬ ಮುಲ್ಲಾ, ಪ್ರಧಾನ ಕಾರ್ಯದರ್ಶಿ ವಿಶಾಲ್ ವಾಘಮೋಡೆ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net