ಮೂಲ ಸೌಲಭ್ಯ ಕಲ್ಪಿಸಲು ಬದ್ಧ

24ckd3-Web
ಮಜಲಟ್ಟಿ ಗ್ರಾಮದಲ್ಲಿ ನೂತನವಾಗಿ ಗ್ರಾಪಂಗೆ ಆಯ್ಕೆಯಾದ ಸದಸ್ಯರು ಶಾಸಕ ಐಹೊಳೆ ಅವರನ್ನು ಸನ್ಮಾನಿಸಿದರು. ಬಿ.ಆರ್.ಸಂಗಪ್ಪಗೋಳ, ಮಹೇಶ ಭಾತೆ ಇತರರು ಇದ್ದರು.
Published on

ಚಿಕ್ಕೋಡಿ: ಮತಕ್ಷೇತ್ರದ ಪ್ರತಿ ಗ್ರಾಮಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದ್ದಾರೆ.

ಮಜಲಟ್ಟಿ ಗ್ರಾಮದಲ್ಲಿ ಪೃಕೃತಿ ವಿಕೋಪ ಪರಿಹಾರ ನಿಧಿಯಡಿಯಲ್ಲಿ ಅಂದಾಜು 50 ಲಕ್ಷ ರೂ. ವೆಚ್ಚದಲ್ಲಿ ಕೈಗೊಂಡಿರುವ ಕರೋಶಿ-ಮಜಲಟ್ಟಿ ರಸ್ತೆ ಸುಧಾರಣೆ ಕಾಮಗಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕರೋಶಿ, ನಾಗರಮುನ್ನೋಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಈಗಾಗಲೇ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ಜನರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಬರುವ ದಿನಗಳಲ್ಲಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಏತ ನೀರಾವರಿ, ಕೆರೆ ತುಂಬುವ ಯೋಜನೆಗಳ ಮಂಜೂರಾತಿಗೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು. ಮಜಲಟ್ಟಿ ಗ್ರಾಪಂ ಸದಸ್ಯರು ಐಹೊಳೆ ಅವರನ್ನು ಸನ್ಮಾನಿಸಿದರು.

ಹೆಸ್ಕಾಂ ನಿರ್ದೇಶಕ ಮಹೇಶ ಭಾತೆ ಮಾತನಾಡಿದರು.ಬಿ.ಆರ್.ಸಂಗಪ್ಪಗೋಳ, ವಿಜಯ ಕೋಟಿವಾಲೆ, ನಿಂಗಪ್ಪ ಕುರುಬರ, ಸಂಜು ಕಾಂಬಳೆ, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net