ಅಭಿವೃದ್ಧಿ ಪಥದತ್ತ ಭಾರತ

dj hyr bjp
Published on

ಹಿರಿಯೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ-ಸರ್ವ ಸ್ಪರ್ಶಿ ಆಡಳಿತದಿಂದ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ನಗರದ ಇತಿಹಾಸ ಪ್ರಸಿದ್ಧ ತೇರುಮಲ್ಲೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ನನ್ನ ದೇಶ ನನ್ನ ಮಣ್ಣು ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ,

ದೇಶದ ಜನರಲ್ಲಿ ನಾವೆಲ್ಲ ಒಂದೇ ಎಂಬ ಐಕ್ಯತಾ ಭಾವನೆ ಮೂಡಿಸುವ ಮೂಲಕ ಒಗ್ಗಟ್ಟು ಪ್ರದರ್ಶನ ಮಾಡುವುದು ಅಭಿಯಾನದ ಉದ್ದೇಶ. ಬಿಜೆಪಿ ಕಾರ್ಯಕರ್ತರು ಕೇಂದ್ರ ಸರ್ಕಾರದ ಸಾಧನೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ್, ಎಂ.ಎಸ್.ರಾಘವೇಂದ್ರ, ಎಂ.ವಿ.ಹರ್ಷ, ವೆಂಕಟೇಶ್, ಕೇಶವಮೂರ್ತಿ, ಹಾಲಪ್ಪ, ಮಾಯಸಂದ್ರ ಮಂಜು, ನಾಗರಾಜ್ ರಾವ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net