ದಕ್ಷಿಣ ಶಿಕ್ಷಕ ಕ್ಷೇತ್ರದ ಮತದಾರರ ನೋಂದಣಿಗೆ ನ.6 ಕೊನೆ ದಿನ: ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಅಧ್ಯಕ್ಷತೆಯಲ್ಲಿ ಸಭೆ

South Teachers Constituency Election ADC Meeting mandya
Published on

ಮಂಡ್ಯ: ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಮತದಾರ ನೋಂದಣಿ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಕರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಿಯುಸಿ, ಇಂಜಿನಿಯರಿಂಗ್, ಪದವಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮತದಾರರ ನೋಂದಣಿ ಸಂಬಂಧ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲರೂ ಕೂಡ ತಮ್ಮ ಕಾಲೇಜು, ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವಂತಹ ಅರ್ಹ ಶಿಕ್ಷಕ ಮತದಾರರ ನೋಂದಣಿ ಮಾಡಿಕೊಳ್ಳಲು ಕ್ರಮವಹಿಸಬೇಕು. ಅರ್ಹ ಮತದಾರರು ತಮ್ಮ ವ್ಯಾಪ್ತಿಯ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದರೆ ಸ್ವೀಕೃತಿಯನ್ನು ಕೊಡುತ್ತಾರೆ. ಅರ್ಜಿ ಸಲ್ಲಿಸಲು ನ.6ಕೊನೆ ದಿನವಾಗಿದೆ ಎಂದರು.

ಸಭೆಯಲ್ಲಿ ಡಿಡಿಪಿಐ ಶಿವರಾಮೇಗೌಡ, ಮಂಡ್ಯ ವಿಶ್ವವಿದ್ಯಾನಿಲಯದ ಕುಲಸಚಿವರಾದ ಆರ್.ಚಂದ್ರಯ್ಯ, ಬಿಇಒಗಳಾದ ಮಹದೇವ, ಸೌಭಾಗ್ಯ, ಮಹಿಳಾ ಸರ್ಕಾರಿ ಕಾಲೇಜು(ಸ್ವಾಯತ್ತ) ಪ್ರಾಂಶುಪಾಲ ಪ್ರೊ.ಆರ್.ದಶರಥ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net