ದಕ್ಷಿಣ ವಲಯ ಅಂತರ ವಿವಿ ಮಹಿಳಾ ಬ್ಯಾಡ್ಮಿಂಟನ್ ಟೂರ್ನಿ 26ರಿಂದ

23 Dwd 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿ0ಗ್ ಮತ್ತು ತಂತ್ರಜ್ಞಾನ ಕಾಲೇಜು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನ. 26ರಿಂದ 28ರವರೆಗೆ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಮಹಿಳಾ ಶಟ್ಲ್ ಬ್ಯಾಡ್ಮಿಂಟನ್ ಟೂರ್ನಿ ಆಯೋಜಿಸಿದೆ ಎಂದು ಕಾಲೇಜು ಪ್ರಾಚಾರ್ಯ ಡಾ. ರಮೇಶ ಚಕ್ರಸಾಲಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಭಾರತದ 100 ವಿಶ್ವವಿದ್ಯಾಲಯಗಳ ಸುಮಾರು 500ಕ್ಕೂ ಹೆಚ್ಚು ಶಟ್ಲರ್‌ಗಳು ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ. ನ. 26ರಂದು ಬೆಳಗ್ಗೆ 9 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಪಂದ್ಯಾವಳಿಗೆ ಚಾಲನೆ ನೀಡುವರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್. ವಿದ್ಯಾಶಂಕರ, ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಜೀವಂಧರ ಕುಮಾರ, ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಡಾ. ಮೃದುಲಾ ಪ್ರಭು, ಕೆನರಾ ಬ್ಯಾಂಕ್ ಹುಬ್ಬಳ್ಳಿ ವೃತ್ತದ ಜನರಲ್ ಮ್ಯಾನೇಜರ್ ಎಂ. ವಿಜಯಕುಮಾರ ಅತಿಥಿಗಳಾಗಿ ಪಾಲ್ಗೊಳ್ಳುವರು. ಎಸ್‌ಡಿಎಂ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ಕುಮಾರ ಅಧ್ಯಕ್ಷತೆ ವಹಿಸುವರು ಎಂದು ಡಾ. ರಮೇಶ ಚಕ್ರಸಾಲಿ ತಿಳಿಸಿದರು.

ಕಾಲೇಜಿನ ವಿದ್ಯಾರ್ಥಿ ಕಲ್ಯಾಣ ಅಽಕಾರಿ ಡಾ. ವಿ.ಕೆ. ಪರ್ವತಿ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಬಿ. ಮಂಜುನಾಥ ಹಾಗೂ ವಿಟಿಯು ಶಟ್ಲರ್‌ಗಳಾದ ದಿವಿತಾ, ಸ್ಮೃತಿ, ರೈನಾ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net