ಬಿತ್ತನೆಗೂ ಮುನ್ನ ಲಕ್ಷ್ಮೀದೇವಿಗೆ ಉಡಿ

7LNG04
Published on

ಲಿಂಗಸುಗೂರು: ಮುಂಗಾರು ಹಂಗಾಮಿನ ಬಿತ್ತನೆಗೆ ತಾಲೂಕಿನ ರೈತರು ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕೂ ಮುನ್ನ ಸಂಪ್ರದಾಯದಂತೆ ಪಟ್ಟಣದ ಲಕ್ಷ್ಮೀ ದೇವಸ್ಥಾನದಲ್ಲಿ ಮುತ್ತೈದೆಯರು ಲಕ್ಷ್ಮೀದೇವಿಗೆ ಶುಕ್ರವಾರ ಉಡಿ ತುಂಬಿದರು.

ಉಡಿ ತುಂಬುವ ಕಾರ್ಯಕ್ರಮ ಪ್ರಯುಕ್ತ ದೇವಸ್ಥಾನವನ್ನು ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆ ಅರ್ಚಕ ಚಂದ್ರಕಾಂತ ಶಾಸ್ತ್ರಿ ಪಂಚಾಮೃತಾಭಿಷೇಕ, ಬಿಲ್ವಾರ್ಚನೆ, ಕುಂಕುಮಾರ್ಚನೆ ನೆರವೇರಿಸಿದರು. ಬಳಿಕ ಪಟ್ಟಣದ ಗದ್ದೆಮ್ಮ ದೇವಸ್ಥಾನದಿಂದ ಗಡಿಯಾರ ವೃತ್ತ, ಬಸ್ ನಿಲ್ದಾಣದ ಮೂಲಕ ಲಕ್ಷ್ಮೀ ದೇವಸ್ಥಾನದವರೆಗೆ ಕಳಸ ಮೆರವಣಿಗೆ ನಡೆಸಲಾಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net