ಹಲೋ ಎಸ್ಪಿ, ಡಿಸಿ, ಡಿಸಿಪಿ ಇದ್ದಾರೆ ಸಮಸ್ಯೆ ಹೇಳಿ!

Screenshot_2023-06-10-12-51-14-42.jpg
Published on

ಬೆಳಗಾವಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ನೇತೃತ್ವದಲ್ಲಿ ಶನಿವಾರ ನಡೆದ 13ನೇ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಡಿಸಿಪಿ ಶೇಖರ ಎಸ್.ಟಿ. ಭಾಗಿಯಾಗಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ನಿವಾರಿಸುವುದಾಗಿ ಭರವಸೆ ನೀಡಿದರು.
ಈ ಹಿಂದೆ ನಡೆದ ನಡೆದಿದ್ದ 12 ಪೋನ್ ಇನ್ ಕಾರ್ಯಕ್ರಮದಲ್ಲಿ ಎಸ್ಪಿ ಅವರು ಮಾತ್ರ ಕರೆಗಳನ್ನು ಸ್ವೀಕರಿಸುತ್ತಿದ್ದರು. ಶನಿವಾರ ನಡೆದ ಪೋನ್ ಇನ್ ನಲ್ಲಿ ಈ ಮೂವರು ಅಧಿಕಾರಿಗಳು ಕರೆಗಳನ್ನು ಅಲಿಸಿದರು.‌ ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಭೂ ದಾಖಲೆಗಳ ಇಲಾಖೆ, ಮಹಿಳಾ‌ ಮತ್ತು ಮಕ್ಕಳ‌ ಅಭಿವೃದ್ಧಿ ಇಲಾಖೆ ಇತರ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದರು.‌ ಕರೆಗಳನ್ನು ಮಾಹಿತಿ‌ ದಾಖಲಿಸಿಕೊಂಡರು.
ಬೆಳಗಾವಿ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ನಗರ ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಮೊಟ್ಟ ಮೊದಲ ಬಾರಿಗೆ ಸಾರ್ವಜನಿಕರು ದೂರವಾಣಿ ಕರೆ ಮಾಡಿ ಸಮಸ್ಯೆ ಹೇಳಿಕೊಂಡರು. ಒಟ್ಟು
ನಗರದ ವ್ಯಕ್ತಿಯೊರ್ವ ಕರೆ ಮಾಡಿ ಮಹಾನಗರ ಪಾಲಿಕೆಯ ಸಮುದಾಯದ ಭವನ ನಿರ್ಮಾಣದಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದೆ. ಅದರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರಿಗೆ ದೂರಿದರು. ಇದಕ್ಕೆ ಸ್ಪಂದಿಸಿದ ಡಿಸಿ ಪಾಲಿಕೆಯ ಆಯುಕ್ತರು ಇಲ್ಲಿಯೇ ಇದ್ದಾರೆ ಅವರಿಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಇಲ್ಲಿಯವರೆಗೆ ತನಿಖೆ ಮಾಡುತ್ತಿಲ್ಲ ಎಂದು ವ್ಯಕ್ತಿಯೊರ್ವ ಕರೆ ಮಾಡಿ ದೂರಿದರು. ಇದಕ್ಕೆ ಸ್ಪಂದಿಸಿದ ಡಿಸಿಪಿ ಶೇಖರ ಎಸ್ ಟಿ, ಮಾರಿಹಾಳ ಸಿಪಿಐ ಹಾಗೂ ಎಸಿಪಿಗೆ ತಿಳಿದಿ ತನಿಖೆ ನಡೆಸಲು ಸೂಚಿಸಲಾಗುವುದು ಎಂದರು.
ಅಥಣಿ ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ವಿನಾಕಾರಣ ಹೆಚ್ಚಿ‌ನ ಡೋನೇಷನ್ ಪಡೆಯುತ್ತಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ವ್ಯಕ್ತಿಯೊರ್ವ ದೂರಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಮೊದಲು ಬಂದು ಪೋಷಕರು ದೂರು ನೀಡಿದರೆ ಆಯಾ ಶಿಕ್ಷಣ ಸಂಸ್ಥೆಯ ವಿರುದ್ಧ ಮುಲ್ಲಾಜಿಲ್ಲದೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ನಗರದಲ್ಲಿನ ಸಂಚಾರ ಸಮಸ್ಯೆ, ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆ, ಕೌಟುಂಬಿಕ ಕಲಹ, ತಾಲೂಕಿನಲ್ಲಿ‌ ಸ್ಮಶಾನ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಜನರು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎದುರು ನಿವೇದಿಸಿಕೊಂಡರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಹಾಗೂ ನಗರ ಪೊಲೀಸ್ ಇಲಾಖೆಯ ಡಿಸಿಪಿ ಅವರಿಗೂ ಕರೆ ಮಾಡಿ ದೂರು ನೀಡಿ ಸಮಸ್ಯೆಗೆ ಪರಿಹಾರ ಕಂಡುಕೊಂಡರು. ರಾಯಬಾಗ ತಾಲೂಕಿನ ಮೊರಬ ಗ್ರಾಮದ ವ್ಯಕ್ತಿಯೊರ್ವ ಕರೆ ಮಾಡಿ, ಯೂಟ್ಯೂಬ್ ಚಾನಲ್ ನ ಹೆಸರು ಹೇಳಿಕೊಂಡು ಜನರಿಗೆ ತೊಂದರೆ ಕೊಡುತ್ತಿದ್ದಾರೆ. ಅಲ್ಲದೆ ವಿಡಿಯೋ ಮಾಡಿ ಬ್ಲ್ಯಾಕ್ ಮೆಲ್ ಮಾಡುತ್ತಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ದೂರಿದರು. ಇದಕ್ಕೆ ಉತ್ತರಿಸಿದ ಎಸ್ಪಿ ಸಂಜೀವ ಪಾಟೀಲ, ಯೂಟ್ಯೂಬ್ ಚಾನಲ್ ಹೆಸರು ಹೇಳಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ, ಬ್ಲ್ಯಾಕ್ ಮೆಲ್ ಮಾಡಿದರೆ ಅಂಥವರ ವಿರುದ್ಧ ದೂರು ನೀಡಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಪೊಲೀಸ್ ಇನಸ್ಪೆಕ್ಟರ್‌ಗಳಾದ ಬಿ.ಆರ್.ಗಡ್ಡೇಕರ, ಮಹಾದೇವ ಎಸ್.ಎಂ. ಬಾಳಪ್ಪ ತಳವಾರ, ವಿಠ್ಠಲ ಮಾದರ, ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net