ಮೂಲೆಹೊಳೆ ಚೆಕ್‌ಪೋಸ್ಟ್‌ಗೆ ಎಸ್ಪಿ ಭೇಟಿ

CHN- GPT 2
Published on

ಗುಂಡ್ಲುಪೇಟೆ: ತಾಲೂಕಿನ ಕೇರಳದ ಗಡಿ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್ ತನಿಖಾ ಠಾಣೆ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಪರಿಶೀಲನೆ ನಡೆಸಿದರು.

ಬುಧವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿದ ಎಸ್‌ಪಿ, ಸರ್ಕಲ್ ಇನ್ಸ್‌ಪೆಕ್ಟರ್ ಮಹದೇವಸ್ವಾಮಿ ಅವರಿಂದ ಮಾಹಿತಿ ಪಡೆದರು. ಅರಣ್ಯ ಇಲಾಖೆಯ ಚೆಕ್‌ಪೋಸ್ಟ್‌ನಲ್ಲಿ ಆಶ್ರಯ ಪಡೆದಿದ್ದರೂ ಬ್ಯಾಟರಿ ಚಾರ್ಜ್ ಸೇರಿದಂತೆ ಅಗತ್ಯ ಸೌಲಭ್ಯಗಳ ಕೊರತೆ ಇದೆ. ಪ್ರತ್ಯೇಕ ಕಟ್ಟಡದ ಅಗತ್ಯವಿರುವುದಾಗಿ ಪೊಲೀಸ್ ಸಿಬ್ಬಂದಿ ಹೇಳಿದರು. ಈ ಸಂಬಂಧ ದಕ್ಷಿಣ ವಲಯದ ಐಜಿಪಿ ಅವರ ಗಮನಕ್ಕೆ ತರುವುದಾಗಿ ಎಸ್ಪಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net