ಅವಹೇಳನಕಾರಿ ನಿಂದನೆ ಪ್ರಕರಣದ ಆರೋಪಿ ಬಂಧನ

SP PRESS MEET
Published on

ಮಡಿಕೇರಿ:

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್. ತಿಮ್ಮಯ್ಯ ಅವರನ್ನು ವಾಟ್ಸಪ್‌ಗ್ರೂಪ್‌ನಲ್ಲಿ ಅವಾಚ್ಯವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕು ಹಾಲೆಟ್ಟಿ ಗ್ರಾಮದ ನಿವಾಸಿ ವಕೀಲ ವೃತ್ತಿಯಲ್ಲಿ ಇರುವ ವಿದ್ಯಾಧರ ಗೌಡ (66) ಎಂಬಾತನನ್ನು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಎಂದು ಕೊಡಗು ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದ್ದಾರೆ.

ನ. 22ರಂದು ಸಪ್ತ ಸಾಗರ (ಕಡಲು) ಎಂಬ ವಾಟ್ಸ್ ಆಪ್ ಗ್ರೂಪ್‌ನಲ್ಲಿ ಶ್ರೀವತ್ಸ ಭಟ್ ಎಂಬ ಹೆಸರಿನ ಮೊಬೈಲ್ ಸಂಖ್ಯೆಯಿAದ ದೇಶದ ಮಹಾನ್ ಸೇನಾ ನಾಯಕರಾದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್. ತಿಮ್ಮಯ್ಯ ಅವರನ್ನು ಅವಾಚ್ಯವಾಗಿ ನಿಂದಿಸಿರುವುದು ಪೊಲೀಸರ ಗಮನಕ್ಕೆ ಬರುತ್ತಿದಂತೆಯೇ ಈ ಕುರಿತು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು ಎಂದು ಶನಿವಾರ ತಮ್ಮ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇಡೀ ದೇಶ ಮಾತ್ರವಲ್ಲದೇ ವಿದೇಶದಲ್ಲೂ ಗೌರವಕ್ಕೆ ಪಾತ್ರರಾಗಿರುವ ನಾಯಕರನ್ನು ಅವಾಚ್ಯವಾಗಿ ಬೈದಿರುವ ಕುರಿತು ಆ ಗ್ರೂಪ್ ಅಡ್ಡಿನ್ ಅವರನ್ನು ವಿಚಾರಣೆ ನಡೆಸಿ ಮಾಹಿತಿ ಪಡೆಯಲಾಗಿದೆ. ಆ ಗ್ರೂಪ್‌ನಲ್ಲಿ 20 ಜನ ಅಡ್ಮಿನ್‌ಗಳಿದ್ದು, ಗ್ರೂಪ್‌ನಲ್ಲಿ ಯಾವುದೇ ರೀತಿಯ ಅವಹೇಳನಕಾರಿ, ಅವಾಚ್ಯವಾಗಿ ನಿಂದಿಸಿ ಸಂದೇಶಗಳನ್ನು ರವಾನಿಸದಂತೆ ಗ್ರೂಪ್‌ನಲ್ಲಿರುವ ಎಲ್ಲರಿಗೂ ಸೂಕ್ತ ತಿಳುವಳಿಕೆ ನೀಡುವಂತೆ ಮತ್ತು ಈ ರೀತಿಯ ಸಂದೇಶಗಳನ್ನು ಹಂಚಿಕೊAಡವರ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಗ್ರೂಪ್ ಅಡ್ಮಿನ್‌ಗಳಿಗೆ ಸೂಚನೆಗಳನ್ನು ನೀಡಲಾಗಿದೆ.

ವಾಟ್ಸ್ಆಪ್ ಗ್ರೂಪ್‌ನಲ್ಲಿ ಅವಾಚ್ಯವಾಗಿ ಸಂದೇಶ ರವಾನಿಸಿದ್ದ ಆರೋಪಿ ಪತ್ತೆಗಾಗಿ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ, ಕುಶಾಲನಗರ ವೃತ್ತದ ಸಿಪಿಐ ರಾಜೇಶ್ ಕೆ., ಸುಂಟಿಕೊಪ್ಪ ಪೊಲೀಸ್ ಠಾಣೆ ಪಿಎಸ್‌ಐ ಚಂದ್ರಶೇಖರ್ ಹೆಚ್.ವಿ., ಅಪರಾಧ ಪತ್ತೆ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿಗಳನ್ನು ಒಳಗೊಂಡAತೆ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಕೈಗೊಂಡು ಶುಕ್ರವಾರವೇ (ನ.22) ಪ್ರಕರಣದ ಆರೋಪಿಯನ್ನು ಶೀಘ್ರವಾಗಿ ಪತ್ತೆ ಹಚ್ಚಲಾಗಿದೆ.

ಸಮುದಾಯದಲ್ಲಿ ಒಳ್ಳೆಯವರು ಇರುವಂತೆ ಕೆಟ್ಟವರೂ ಇರುತ್ತಾರೆ. ಒಂದು ಸಮುದಾಯದ ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಸಮುದಾಯವನ್ನೇ ಗುರಿ ಮಾಡುವುದು ಸರಿ ಅಲ್ಲ. ವಿದ್ಯಾಧರ ಎನ್ನುವ ವಕೀಲ ಶ್ರೀವತ್ಸ ಭಟ್ ಎಂದಬ ನಕಲಿ ಹೆಸರು ಬಳಸಿ ಸಂದೇಶಗಳನ್ನು ಹಾಕುತ್ತಿದ್ದು. ಆದರೆ ಶ್ರೀವತ್ಸ ಭಟ್ ಎನ್ನುವ ಹೆಸರಿನಲ್ಲಿ ಬಳಕೆ ಆಗುತ್ತಿದ್ದ ಸಿಮ್ ಸುಜಾತ ಎಂಬವರ ಹೆಸರಲ್ಲಿ ಖರೀದಿ ಆಗಿತ್ತು. ಗ್ರೂಪ್‌ನಲ್ಲಿ ರಾಜಕೀಯ ವಿಷಯದ ಚರ್ಚೆ ಆಗುವ ಸಂದರ್ಭ ಈ ಹೇಳಿಕೆ ಬಂದಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಮುಂದೆ ಇನ್ನೂ ತನಿಖೆ ಮಾಡಲಾಗುವುದು. ಇನ್ನೊಂದು ಪ್ರಕರಣದಲ್ಲಿ ಕೊಡವ ಸಮುದಾಯದ ಮಹಿಳೆಯರ ವಿರುದ್ಧದ ಅವಹೇಳನ ವಿರುದ್ಧವೂ ಎಫ್‌ಐಆರ್ ಆಗಿದೆ ಎಂದು ಮಾಹಿತಿ ನೀಡಿದರು.

ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಯಾವುದೇ ರೀತಿಯ ಸಂದೇಶ, ಭಾವಚಿತ್ರ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮುನ್ನ ಸತ್ಯ-ಅಸತ್ಯತೆಯನ್ನು ಪರಿಶೀಲಿಸಿಕೊಳ್ಳಬೇಕು. ಕೊಡಗು ಜಿಲ್ಲಾ ಪೊಲೀಸ್ ಸಾಮಾಜಿಕ ಜಾಲತಾಣಗಳ ಮೇಲೆ ಸಂಪೂರ್ಣ ನಿಗಾವಹಿಸಿದ್ದು, ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಸುಳ್ಳು ಸುದ್ದಿಯ ಪೋಸ್ಟ್ಗಳನ್ನು ಹರಿಬಿಟ್ಟು ಅಪಪ್ರಚಾರ ಮಾಡುವ ಮತ್ತು ಆತಂಕ ಸೃಷ್ಟಿಸುವ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಂಬAಧಿಸಿದ ಗ್ರೂಪ್ ಅಡ್ಮಿನ್ ಕೂಡ ಜವಾಬ್ದಾರಿಯಾಗಿದ್ದು

ಅಡ್ಮಿನ್‌ಗಳನ್ನೂ ಕ್ರಮಕ್ಕೆ ಒಳಪಡಿಸಲಾಗುವುದು.

ಯಾವುದೇ ರೀತಿ ಅಕ್ರಮ ಚಟುವಟಿಕೆಗಳ ಕುರಿತು ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಅಥವಾ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದಿದ್ದಾರೆ.

ಹೆಚ್ಚುವರಿ ಎಸ್‌ಪಿ ಸುಂದರ್‌ರಾಜ್ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net