

ಹನೂರು: ಸಮೀಪದ ಬೂದುಬಾಳು ಗ್ರಾಮದ ಹೊರವಲಯದಲ್ಲಿ ಸಿಡಿಮದ್ದು ಸ್ಫೋಟಿಸಿ ಹಸು ಗಾಯಗೊಂಡ ಸ್ಥಳಕ್ಕೆ ಮಂಗಳವಾರ ಸಂಜೆ ಎಸ್ಪಿ ಡಾ. ಬಿ.ಟಿ ಕವಿತಾ ಭೇಟಿ ನೀಡಿ ಪರಿಶೀಲಿಸಿದರು. ಘಟನೆ ಸಂಬಂಧ ಗ್ರಾಮಸ್ಥರು ಹಾಗೂ ಪೊಲೀಸರಿಂದ ಮಾಹಿತಿ ಪಡೆದು ಮಾತನಾಡಿದ ಅವರು, ವನ್ಯಜೀವಿಗಳನ್ನು ಬೇಟೆಯಾಡುವ ಉದ್ದೇಶದಿಂದ ಕೆಲವರು ಈ ಕೃತ್ಯವನ್ನು ಎಸಗುತ್ತಿದ್ದಾರೆ. ಇದರಿಂದ ಮೂಕ ಪ್ರಾಣಿಗಳು ಬಲಿಯಾಗುತ್ತಿವೆ. ಇಂತಹವರ ಬಗ್ಗೆ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ತಿಳಿಸಬೇಕು. ಈ ಬಗ್ಗೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗ್ರಾಮಸ್ಥರಿಗೆ ತಿಳಿಸಿದರು. ಈ ಸಂಬಂಧ ಅಗತ್ಯ ಕ್ರಮವಹಿಸುವಂತೆ ಪೊಲೀಸರಿಗೆ ಸೂಚಿಸಿದರು.
ಡಿವೈಎಸ್ಪಿ ಡಾ. ಧರ್ಮೇಂದ್ರ, ಎಸೈ ಮಂಜುನಾಥ್ ಪ್ರಸಾದ್, ಸ್ಥಳೀಯ ಮುಖಂಡರಾದ ಮಹದೇವ, ರಾಜೇಶ್ ಹಾಗೂ ಇನ್ನಿತರರು ಇದ್ದರು.