

ಕುಶಾಲನಗರ:
ಕುವೆಂಪು ಜನ್ಮದಿನದ ಅಂಗವಾಗಿ ಕುವೆಂಪು ಭಾಷಾ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೆಂಪು ಕುರಿತಾದ ಭಾಷಣ ಸ್ಪರ್ಧೆಯಲ್ಲಿ ಇಲ್ಲಿನ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರ್.ಎಸ್. ಸ್ಪಂದನಾ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟದ ಸ್ಪರ್ಧೆ ಮಡಿಕೇರಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ತೋರಿದ ವಾಕ್ಚಾತುರ್ಯದಿಂದಾಗಿ ಇವರು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.