

ಮಡಿಕೇರಿ:
ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಿ.ಧನರಾಜು ಅವರು ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನಾ ಕಾರ್ಯಕ್ರಮ-2025 ರ ಅನುಷ್ಠಾನದ ಬಗ್ಗೆ ಭಿತ್ತಿ ಪತ್ರಗಳು, ಕರಪತ್ರಗಳು ಹಾಗೂ ಬ್ಯಾನರ್‌ಗÀಳನ್ನು ಗುರುವಾರ ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗ ಡಾ. ಎಂ.ಕೆ. ಸತೀಶ್ ಕುಮಾರ್, ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ನಡೆಸಲಾಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯ ಎಂದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮಾಧಿಕಾರಿ ಡಾ. ಎನ್.. ಆನಂದ್ ಮಾತನಾಡಿ ಜ.30 ರಿಂದ ಫೆ.13 ರವರೆಗೆ ಜಿಲ್ಲೆಯಾದ್ಯಂತ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ” ಕಾರ್ಯಕ್ರಮ ನಡೆಯಲಿದೆ. ಪ್ರತಿ ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಹಾಗೂ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಲಾಗುವುದು.
ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ರೇಡಿಯೋ ಪ್ರಸಾರವನ್ನು ಕೂಡ ಮಾಡಲಾಗುವುದು. ಕೊಡಗು ಜಿಲ್ಲೆಯಲ್ಲಿ 1 ಪಿ.ಬಿ ಮತ್ತು 3 ಎಂ.ಬಿ ಒಟ್ಟು 4 ಪ್ರಕರಣಗಳಿದ್ದು, ಇವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವ್ಯಾಪಕ ಪ್ರಚಾರ ಕೈಗೊಳ್ಳಲು ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು ಸಮುದಾಯ ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ಸೂಚಿಸಲಾಗಿದೆ. ವಿವಿಧ ಇಲಾಖೆಯ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಸಲಾಗುತ್ತಿದೆ ಎಂದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮಾಧಿಕಾರಿ ಡಾ. ಎ.ಆರ್. ಮಧುಸೂಧನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ. ಶಾಂತಿ ಮತ್ತಿತರರು