ಕುಷ್ಠರೋಗಿಗಳನ್ನು ತಾರತಮ್ಯದಿಂದ ನೋಡಬೇಡಿ: ಜಿಲ್ಲಾಧಿಕಾರಿ ಡಾ.ಕುಮಾರ ಮನವಿ

Sparsh Leprosy Awareness Campaign mandya
Published on

ಮಂಡ್ಯ: ಕುಷ್ಠರೋಗಕ್ಕೆ ತುತ್ತಾದವರನ್ನು ತಾರತಮ್ಯದಿಂದ ನೋಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ವಾರ್ತಾ ಹಾಗೂ ಶಿಕ್ಷಣ ಇಲಾಖೆ, ಜಿಲ್ಲಾ ಕುಷ್ಠರೋಗ ಬಾಧಿತರ ಸಂಘದ ಸಹಯೋಗದೊಂದಿಗೆ ಆಯೋಜಿಸಿದ್ದ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಫೆ.13ರವರೆಗೆ ಆಂದೋಲನ ನಡೆಯಲಿದೆ. ಜತೆಗೆ ಕುಷ್ಠರೋಗ ಬಾಧಿತರನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡಲಾಗುವುದು. ರೋಗದ ಲಕ್ಷಣಗಳು ಕಂಡುಬಂದರೆ ಸಾರ್ವಜನಿಕರು ಪರೀಕ್ಷೆಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳಿ. ಕುಷ್ಠರೋಗ ಬಾಧಿತರಿಗೆ ಅಧಿಕಾರಿಗಳು ಆತ್ಮಸ್ಥೈರ್ಯ ತುಂಬಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಲಸಿಕಾಧಿಕಾರಿ ಡಾ.ಅನಿಲ್ಕುಮಾರ್, ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಆಶಾಲತಾ, ಡಾ.ರೋಹಿಣಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net