

ಚಿತ್ರದುರ್ಗ: ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ನಗರ ಮತ್ತು ಜಿಲ್ಲೆಯ ಆಯಕಟ್ಟಿನ ಪ್ರದೇಶಗಳಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಎಸ್‌ಪಿ ಪರಶುರಾಂ ತಿಳಿಸಿದ್ದಾರೆ.
ಮಂಗಳವಾರ ನಸುಕಿನಲ್ಲಿ ಪಿಎಫ್‌ಐ ಕಾರ್ಯಕರ್ತನೊಬ್ಬನನ್ನು ಚಿತ್ರದುರ್ಗದಲ್ಲಿ ಪೊಲೀಸರು ಬಂಧಿಸಿದ್ದರು. ಸಂಘಟನೆ ನಿಷೇಧ ಮತ್ತು ರಾಜ್ಯದ ಹಲವೆಡೆ ಕಾರ್ಯಕರ್ತರನ್ನು ಬಂಧಿಸಿರುವ ಕಾರಣ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.