

ಮಂಗಳೂರು: ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿಯಾಗಿ ಸೌಹಾರ್ದ ಮಾತುಕತೆ ನಡೆಸಿದರು.
ಕಿರಿಯ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ಸುದೈವ. ಸ್ಪೀಕರ್ ಹುದ್ದೆಯಲ್ಲಿ ನಿಮಗೆ ಸಿಗುವ ಅನುಭವ, ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಉಪರಾಷ್ಟ್ರಪತಿ ಸಲಹೆ ನೀಡಿದರು.
ಸಭಾಧ್ಯಕ್ಷರಾಗಿ ಕಾರ್ಯ ಸಲ್ಲಿಸುವಷ್ಟು ದಿನ ಸದನದ ಘನತೆ, ಗೌರವ ಎತ್ತಿಹಿಡಿದು ಶಾಸಕರ ಹಾಗೂ ರಾಜ್ಯದ ಜನರ ಮನಗೆಲ್ಲಿ. ಕರ್ನಾಟಕದ ಜನರ ಸಂಸ್ಕೃತಿ, ಆಚಾರ ವಿಚಾರದ ಬಗ್ಗೆ ಅಪಾರ ಗೌರವವಿದೆ. ಶಾಸನ ಸಭೆಯ ನಡವಳಿಕೆಯ ಯಾವುದೇ ಮಾರ್ಗದರ್ಶನ ನೀಡಲು ನಿಮ್ಮೊಂದಿಗೆ ಇದ್ದೇನೆ ಎಂದು ಜಗದೀಪ್ ಧನಕರ್ ಅವರು ಶುಭ ಕೋರಿದರು.