ಪರೀಕ್ಷಾ ಸಮಯದಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಅನುಕೂಲ: ಮುಖ್ಯಶಿಕ್ಷಕ ಗೋಪಾಲ ಮೆಚ್ಚುಗೆ

Published on

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ನ, ಬೆಳ್ತಂಗಡಿ ತಾಲೂಕಿನ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ, ಸರ್ಕಾರಿ ಪ್ರೌಢಶಾಲೆ ಮಿತ್ತಬಾಗಿಲಿನಲ್ಲಿ 3 ತಿಂಗಳ ಕಾಲ ನಡೆದ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ವಿಶೇಷ ತರಗತಿ ಸಮಾರೋಪ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಶಾಲಾ ಮುಖ್ಯಶಿಕ್ಷಕ ಗೋಪಾಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೇಮಾವತಿ ಹೆಗ್ಗಡೆ ಕನಸಿನ ಕಾರ್ಯಕ್ರಮವಾದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ವಿಶೇಷ ತರಗತಿ ಹಮ್ಮಿಕೊಂಡಿದ್ದು, ಪರೀಕ್ಷಾ ಸಮಯದಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಅನುಕೂಲವಾಗಿದೆ ಎಂದರು.

ಧ.ಗ್ರಾ.ಯೋಜನೆಯ ತಾಲೂಕು ಯೋಜನಾಧಿಕಾರಿ ಸುರೇಂದ್ರ ಮಾತನಾಡಿ, ಯೋಜನೆಯ ಮೂಲಕ ಮಕ್ಕಳ ಶಿಕ್ಷಣಕ್ಕೆ ಪೂರಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿದ್ಯೆಯ ಜತೆಗೆ ಮಕ್ಕಳಲ್ಲಿ ಸಂಸ್ಕೃತಿ-ಸಂಸ್ಕಾರ ಕೂಡ ಬೆಳೆಸಿಕೊಳ್ಳಬೇಕು. ಈ ತರಗತಿ ಉತ್ತಮ ಪ್ರಯೋಜನ ಪಡೆದು ಉತ್ತಮ ಅಂಕ ಗಳಿಸುವುದರೊಂದಿಗೆ ನಿಮ್ಮ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ. ಕ್ಷೇತ್ರದ ಸ್ವಾಮಿಯ ಅನುಗ್ರಹ ನಿಮ್ಮ ಮೇಲಿರಲಿ ಎಂದರು.

ಶಿಕ್ಷಕಿ ಶ್ವೇತಾ ವಿಶೇಷ ತರಗತಿ ನೀಡಿದರು. ಎಸ್‌ಡಿಎಂಸಿ ಸದಸ್ಯರು ಹಾಗೂ ಒಕ್ಕೂಟ ಕಾರ್ಯದರ್ಶಿ ರಮೇಶ್ ಉಪಸ್ಥಿತರಿದ್ದರು.

ಸಮನ್ವಯಾಧಿಕಾರಿ ಮಧುರಾ ವಸಂತ್ ನಿರೂಪಿಸಿದರು. ಸೇವಾಪ್ರತಿನಿಧಿ ವರಲಕ್ಷ್ಮೀ ಸ್ವಾಗತಿಸಿದರು. ಶಾಲಾ ಶಿಕ್ಷಕರಾದ ಮಂಜುಳಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net