ವಿಶೇಷ ನೃತ್ಯ ಕಾರ್ಯಕ್ರಮ

50 Years Karnataka logo
Published on

ಧಾರವಾಡ: ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಟ್ರಸ್ಟ್ ವತಿಯಿಂದ ಕರ್ನಾಟಕ ಸಂಭ್ರಮ- 50 ಪ್ರಯುಕ್ತ ಕನ್ನಡದ ಹೆಸರಾಂತ ಕವಿಗಳ ಹಾಡುಗಳ ವಿಶೇಷ ನೃತ್ಯ ಕಾರ್ಯಕ್ರಮವನ್ನು ನ. 25ರಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿ- ಧಾರವಾಡದ 19 ಶಾಸೀಯ ನೃತ್ಯ ಕಲಾತಂಡಗಳು ಕನ್ನಡದ ಕವಿಗಳ ಗೀತೆಗಳಿಗೆ ವಿಶೇಷ ನೃತ್ಯ ಪ್ರಸ್ತುತಪಡಿಸಲಿದ್ದಾರೆ. ಉತ್ತರ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ರಾಜೇಶ್ವರಿ ಮಹೇಶ್ವರಯ್ಯ ಉದ್ಘಾಟಿಸುವರು. ಟ್ರಸ್ಟ್ ಅಧ್ಯಕ್ಷ ಡಾ. ಪ್ರಮೋದ ಗಾಯಿ ಅಧ್ಯಕ್ಷತೆ ವಹಿಸುವರು. ವಿದುಷಿ ಸುಜಾತಾ ರಾಜಗೋಪಾಲ ಹಾಗೂ ವಿದುಷಿ ರೋಹಿಣಿ ಇಮಾರತಿ ಅತಿಥಿಗಳಾಗಿ ಭಾಗವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net