

ಕಿಕ್ಕೇರಿ: ಸಮೀಪದ ಕೊರಟಿಕೆರೆಯ ಶ್ರೀ ರಾಮಲಿಂಗ ಚೌಡೇಶ್ವರಿ ದೇಗುಲದಲ್ಲಿ ಅಮ್ಮನವರಿಗೆ ವಿಶೇಷ ಪೂಜೆ ಜರುಗಿತು.
ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವದ ಅಂಗವಾಗಿ ಅಧಿಕವಾಗಿ ಗುರುವಾರ ದೇಗುಲದಲ್ಲಿ ಚಂಡಿಕಾ ಹೋಮ, ದೇವಿಗೆ ವಿಶೇಷ ಪೂಜೆ ನೆರವೇರಿತು. ಅಮ್ಮನವರ ಶಿಲಾಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಲಾಗಿತ್ತು.
ಸುಗಮ ಸಂಗೀತ ಗಾಯಕ ಯರಹಳ್ಳಿ ಪುಟ್ಟಸ್ವಾಮಿ ತಂಡದಿಂದ ಗೀತಾಗಾಯನ ಹಮ್ಮಿಕೊಳ್ಳಲಾಗಿತ್ತು. ಹೆಚ್ಚಿನ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.
ದೇಗುಲ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವಿಶ್ವನಾಥ್, ಕಾರ್ಯದರ್ಶಿ ಗೋವಿಂದರಾಜು, ಖಜಾಂಚಿ ಅಶೋಕ್ ಕುಮಾರ್, ಕೆಆರ್ ನೀಲಕಂಠ, ಬೆಂಗಳೂರಿನ ಅಹಲ್ಯ ಫೌಂಡೇಷನ್ ಸೇವಾ ಸಂಸ್ಥೆ ಅಧ್ಯಕ್ಷೆ ಮಹಾಲಕ್ಷ್ಮೀ ಇದ್ದರು.