ವರಮಹಾಲಕ್ಷ್ಮೀಗೆ ಹೂಗಳಿಂದ ವಿಶೇಷ ಅಲಂಕಾರ

25sor2
ಸೊರಬದ ಪೂಜಾ ದತ್ತ ಅವರ ಮನೆಯಲ್ಲಿ ವರಮಹಾಲಕ್ಷ್ಮೀಗೆ ವಿಶೇಷ ಪೂಜೆ ಸಲ್ಲಿಸಿರುವುದು.
Published on

ಸೊರಬ: ಪಟ್ಟಣ, ಗ್ರಾಮೀಣ ಪ್ರದೇಶ ಸೇರಿದಂತೆ ತಾಲೂಕಿನ ಎಲ್ಲೆಡೆ ವರಮಹಾಲಕ್ಷ್ಮೀ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಪಟ್ಟಣಕ್ಕೆ ಸೀಮಿತವಾಗಿದ್ದ ವರಮಹಾಲಕ್ಷ್ಮೀ ಪೂಜೆ ಇತ್ತಿಚೇಗೆ ಗ್ರಾಮೀಣ ಪ್ರದೇಶದಲ್ಲೂ ಹೆಚ್ಚಾಗಿದ್ದು ಎಲ್ಲೆಡೆ ಹರ್ಷ ಮನೆ ಮಾಡಿತ್ತು. ಮಹಿಳೆಯರು ಮನೆಗಳಲ್ಲಿ ವರಮಹಾಲಕ್ಷ್ಮೀ ಮೂರ್ತಿ ಪ್ರತಿಷ್ಠಾಪಿಸಿ, ತಳಿರು-ತೋರಣ, ನಾನಾ ಬಗೆಯ ಹೂವುಗಳಿಂದ ಅಲಂಕಾರಗೊಳಿಸಿ ವಿಶೇಷ ಪೂಜೆ ಸಲ್ಲಿಸಿದರು. ಹಲವು ರೀತಿಯ ಸಿಹಿ ತಿಂಡಿಗಳನ್ನು ದೇವರಿಗೆ ನೈವೇದ್ಯ ಮಾಡಿದರು. ಬಾಗಿನ ವಿನಿಮಯ ಮಾಡಿಕೊಂಡು ಶುಭ ಕೋರುವುದು ಸಾಮಾನ್ಯವಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net