

ಗುಂಡ್ಲುಪೇಟೆ: ಆಶಾಢ ಮಾಸದ ಮೂರನೇ ಶುಕ್ರವಾರದ ಅಂಗವಾಗಿ ಪಟ್ಟಣದ ಶ್ರೀರಾಮೇಶ್ವರ ದೇವಾಲಯದಲ್ಲಿ ಅಮ್ಮನವರನ್ನು ತರಕಾರಿ ಹಾಗೂ ಹಣ್ಣುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.
ಪ್ರಧಾನ ಅರ್ಚಕ ಶಂಕರನಾರಾಯಣ ಜೋಯಿಸ್ ನೇತೃತ್ವದಲ್ಲಿ ರೈತರು ಹಾಗೂ ತರಕಾರಿ ಮಾರುಕಟ್ಟೆಯ ಭಕ್ತರು ಸಮರ್ಪಿಸಿದ್ದ ವಿವಿಧ ತರಕಾರಿ ಮತ್ತು ಹಣ್ಣುಗಳಿಂದ ಅಮ್ಮನವರ ಮೂರ್ತಿಯನ್ನು ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪಟ್ಟಣ ಹಾಗೂ ಅಕ್ಕಪಕ್ಕದ ಗ್ರಾಮಗಳ ಭಕ್ತರು ದೇವಾಲಯಕ್ಕೆ ಆಗಮಿಸಿ ದರ್ಶನ ಪಡೆದರು.