

ಹುಬ್ಬಳ್ಳಿ : ಯುಗಾದಿ ಮತ್ತು ರಮಜಾನ್ ಹಬ್ಬದ ಪ್ರಯುಕ್ತ ಬೆಂಗಳೂರು-ಬೆಳಗಾವಿ ಮಧ್ಯೆ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ನೈಋತ್ಯ ರೈಲ್ವೆ ವಲಯ ಪ್ರಾರಂಭಿಸಿದೆ.
ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್ಪ್ರೆಸ್ ರೈಲು ಮಾ. 28ರಂದು ಸಂಜೆ 7:00 ಗಂಟೆಗೆ ಹೊರಟು, ಮರುದಿನ ಬೆಳಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ.
ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು ಮಾ. 29 ರಂದು ಸಂಜೆ 5 ಗಂಟೆಗೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗಿನ ಜಾವ 4.30ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.
ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್ಪ್ರೆಸ್ ರೈಲು ಮಾ. 30 ರಂದು ರಾತ್ರಿ 7 ಗಂಟೆಗೆ ಹೊರಟು, ಮರುದಿನ ಬೆಳಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ.
ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು ಮಾ. 31 ರಂದು ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗಿನ ಜಾವ 4.30ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.
ಈ ವಿಶೇಷ ರೈಲುಗಳು ಎರಡೂ ಮಾರ್ಗಗಳಲ್ಲಿ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ.