ಶ್ರೀ ಹುಚ್ಚರಾಯಸ್ವಾಮಿಗೆ ವಿಶೇಷ ಹೂವಿನ ಅಲಂಕಾರ

9 ಎಸ್ಕೆಪಿ 1b
ಶಿಕಾರಿಪುರದಲ್ಲಿ ಶ್ರೀ ಹುಚ್ಚರಾಯಸ್ವಾಮಿಗೆ ವಿಶೇಷ ಅಲಂಕಾರ ಮಾಡಿರುವುದು.
Published on

ಶಿಕಾರಿಪುರ: ಶ್ರಾವಣ ಮಾಸದ ಕಡೆಯ ಶನಿವಾರದ ನಿಮಿತ್ತ ಕ್ಷೇತ್ರಾಧಿಪತಿ ಶ್ರೀ ಹುಚ್ಚರಾಯಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.

ಮುಂಜಾನೆಯಿಂದಲೇ ಅರ್ಚಕ ಉಮೇಶ್ ಭಟ್ ನೇತೃತ್ವದಲ್ಲಿ ಶ್ರೀ ರಾಮರಕ್ಷಾ ಪಾರಾಯಣ, ರುದ್ರಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದವು. ಶ್ರೀ ಸೀತಾರಾಮಚಂದ್ರ, ಲಕ್ಷ್ಮಣ, ಹುಚ್ಚರಾಯಸ್ವಾಮಿ ಹಾಗೂ ಮಹಾಗಣಪತಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಕಡೆಯ ಶ್ರಾವಣ ಶನಿವಾರವಾದ್ದರಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಸ್ವಾಮಿಯ ದರ್ಶನ ಪಡೆದರು. ಪೌರಕಾರ್ಮಿಕರಿಂದ ದೇವರ ದರ್ಶನಕ್ಕೆ ಬಂದ ಭಕ್ತಾದಿಗಳಿಗೆ ಲಘು ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net