ಸುಂಟಿಕೊಪ್ಪದಲ್ಲಿ ವಿಶೇಷ ಗ್ರಾಮಸಭೆ

05sunti01
ಸುಂಟಿಕೊಪ್ಪ ವಿಶೇಷ ಗ್ರಾಮ ಸಭೆಯಲ್ಲಿ ಅಧ್ಯಕ್ಷ ಆಡಳಿತ ಮಂಡಳಿ ಸದಸ್ಯರು ಹಾಗೂ ಅಧಿಕಾರಿಗಳು ಪಾಲ್ಗೊಂಡಿರುವುದು.
Published on

ಸುಂಟಿಕೊಪ್ಪ: ಸುಂಟಿಕೊಪ್ಪ ಗ್ರಾಮ ಪಂಚಾಯಿತಿ 2023-24ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಗುರುವಾರ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಗ್ರಾಮ ಸಭೆಯಲ್ಲಿ ಜಿಲ್ಲಾ ಸಂಯೋಜಕ ದಿನೇಶ್ ಅವರು 2023-24ನೇ ಸಾಲಿನ ಉದ್ಯೋಗ ಖಾತ್ರಿ ಮತ್ತು 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ವಿವರ ಮತ್ತು ಖರ್ಚು ವೆಚ್ಚವನ್ನು ಮಂಡಿಸಿದರು. ಒಂಬುಡ್ಸ್‌ಮನ್ ಎನ್.ಎಸ್.ಮಹದೇವ ಪ್ರಸಾದ್ ಹಾಗೂ ನೋಡಲ್ ಅಧಿಕಾರಿಯಾಗಿ ಸೋಮವಾರಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ ಉಪಸ್ಥಿತರಿದ್ದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನೀಲ್‌ಕುಮಾರ್ ಅವರು ವಿಶೇಷ ಗ್ರಾಮ ಸಭೆಗೆ ಚಾಲನೆ ನೀಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್, ಗ್ರಾಪಂ ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರಾದ ಪಿ.ಎಫ್.ಸಬಾಸ್ಟೀನ್, ಎಚ್.ಯು.ರಫೀಕ್‌ಖಾನ್, ಎ.ಶಬೀರ್, ಕೆ.ಕೆ.ಪ್ರಸಾದ್ ಕುಟ್ಟಪ್ಪ, ಕೆ.ಎಂ.ಆಲಿಕುಟ್ಟಿ, ಆರ್.ಎಸ್.ವಸಂತಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಚಂದ್ರಕಲಾ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧಕ ವಿಕ್ರಂ ಮತ್ತು ತಂಡದವರು, ಇಂಜಿನಿಯರ್ ವಿಷ್ಣು, ಸಿಬ್ಬಂದಿ ಎಸ್.ಎ.ಶ್ರೀನಿವಾಸ್, ಇ.ಎಸ್.ಸಂಧ್ಯಾ, ಡಿ.ಎಂ.ಮಂಜುನಾಥ್ ಮತ್ತು ಸಿಬ್ಬಂದಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net