ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ
Published on

ಅರಸೀಕೆರೆ ಗ್ರಾಮಾಂತರ: ಅರಸೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಮತ್ತು ಇತಿಹಾಸ ವಿಭಾಗದ ಸಹಯೋಗದಲ್ಲಿ ಕಮಿಷನರ್ ಆಳ್ವಿಕೆಯಲ್ಲಿ ಮೈಸೂರು ಸಂಸ್ಥಾನದ ಅಭಿವೃದ್ಧಿ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಗುರುವಾರ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಜರುಗಿತು

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಹೊಯ್ಸಳೇಶ್ವರ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಸುಧಾ ಮಾತನಾಡಿ, ಅಂದಿನ ಕಮಿಷನರ್ ನೇಮಕದೊಂದಿಗೆ ಬ್ರಿಟಿಷ್ ಆಳ್ವಿಕೆಯಲ್ಲಿ ಮೈಸೂರು ಸಂಸ್ಥಾನದ ಅಭಿವೃದ್ಧಿ ಮತ್ತು 1947ರವರೆಗಿನ ಶಿಕ್ಷಣ ಮತ್ತು ಇತರ ಅಭಿವೃದ್ಧಿ ಕ್ಷೇತ್ರಗಳಿಗೆ ಬ್ರಿಟಿಷರ ಕೊಡುಗೆ ಕುರಿತು ವಿಸ್ತಾರವಾಗಿ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ನಾರಾಯಣ ಮಾತನಾಡಿ, ವಿದ್ಯಾರ್ಥಿಗಳು ಭಾರತದ ಅಭಿವೃದ್ಧಿಯ ಹರಿಕಾರರನ್ನು ಅರ್ಥಮಾಡಿಕೊಳ್ಳಲು ಇಂತಹ ಕಾರ್ಯಕ್ರಮ ಅವಶ್ಯಕ ಎಂದು ಹೇಳಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥೆ ಎ.ಗೀತಾ, ಡಾ.ರಾಜೇಶ್ ಖನ್ನಾ, ಐಕ್ಯೂಎಸಿ ಸಂಯೋಜಕ ಡಾ.ಸುನೀಲ್ ಕುಮಾರ್, ಎಚ್.ಪಿ. ಉಷಾ, ಡಾ.ಜಿ.ಎಲ್.ಭಾಸ್ಕರ್, ಎನ್.ಚಿತ್ರಕಲಾ, ಡಾ. ಬಿ.ಶಿವಕುಮಾರ, ವೀಣಾ, ಡಾ.ಹರೀಶ್ ಕುಮಾರ್, ಕೆ.ಟಿ.ಮೋಹನ್ ರಾಜ್, ಹರೀಶ್, ಗಂಗಾ, ಮಮತಾ, ಪ್ರತಿಭಾ ಮತ್ತು ರಾಘವೇಂದ್ರ ಬಜಂತ್ರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net