ಸಾಹಿತ್ಯ ಪರಿಷತ್ತಿನಿಂದ ವಿಶೇಷ ಉಪನ್ಯಾಸ

Mbd_sahithya parishad
Published on

ಮೂಡುಬಿದಿರೆ: ಪ್ರತಿದಿನ ಪತ್ರಿಕೆ ಓದುವುದರಿಂದ ಸಮಾಜದ ಆಗುಹೋಗು ತಿಳಿದುಕೊಳ್ಳುವುದರ ಜತೆಗೆ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ಪರಿಣಾಮಕಾರಿ ಸಂವಹನ, ಶಬ್ದ ಸಂಪತ್ತಿನ ವೃದ್ಧಿ ಸಾಧ್ಯ ಎಂದು ಆಳ್ವಾಸ್ ಕಾಲೇಜು ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು.

ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕ, ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜು ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶ್ರೀ ಮಹಾವೀರ ಪದವಿ ಕಾಲೇಜು ಪ್ರಾಂಶುಪಾಲ ಡಾ.ರಾಧಾಕೃಷ್ಣ ಶೆಟ್ಟಿ, ಪಿಯು ಕಾಲೇಜು ಪ್ರಾಂಶುಪಾಲ ರಮೇಶ್ ಭಟ್ ಉಪಸ್ಥಿತರಿದ್ದರು. ಕಸಾಪ ಮೂಡುಬಿದಿರೆ ತಾಲೂಕು ಘಟಕ ಅಧ್ಯಕ್ಷ ಕೆ.ವೇಣುಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ತಾಲೂಕು ಘಟಕ ಕಾರ್ಯದರ್ಶಿ ಸದಾನಂದ ನಾರಾವಿ ನಿರೂಪಿಸಿದರು. ಉಪನ್ಯಾಸಕಿ ವಿಜಯಲಕ್ಷ್ಮೀ ಮಾರ್ಲಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net