ಶಿರ್ವದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

shirva
Published on

ಶಿರ್ವ: ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜು ಶಿರ್ವ ಹಾಗೂ ವೀರರಾಣಿ ಚಿಕ್ಕಾಯಿ ತಾಯಿ ಟ್ರಸ್ಟ್, ಗುಳ್ಳಾಡಿ ಹಾಗೂ ಕಾಲೇಜಿನ ಮಾನವಿಕ ಸಂಘ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಮಿಥುನ್ ಚಕ್ರವರ್ತಿ ಅಧ್ಯಕ್ಷತೆ ವಹಿಸಿದ್ದು, ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗ ಮುಖ್ಯಸ್ಥೆ ಪ್ರಶಾಂತಿ, ಚಿಕ್ಕಾಯಿ ತಾಯಿ ಟ್ರಸ್ಟ್ ಸ್ಥಾಪಕಾಧ್ಯಕ್ಷ ಡಾ.ರಘುರಾಮ ಶೆಟ್ಟಿ ಗುಳ್ಳಾಡಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ದಿವ್ಯಾ ನಿರೂಪಿಸಿದರು. ತನುಶ್ರೀ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net