ಇಂದು ವಿಶೇಷ ಉಪನ್ಯಾಸ

ಉಪನ್ಯಾಸ
Published on

ವಿಜಯಪುರ : ನಗರ ಹೊರ ವಲಯದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದ ಸಭಾಭವನದಲ್ಲಿ ಅ. 22 ರಂದು ಮಧ್ಯಾಹ್ನ 3 ಕ್ಕೆ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಪ್ರಸ್ತುತ ಸಾಮಾಜಿಕ ನೆಲೆಯಲ್ಲಿ ವಾಲ್ಮೀಕಿ ರಾಮಾಯಣ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಟಕದ ಸಹಯೋಗದಲ್ಲಿ ಉಪನ್ಯಾಸ ಆಯೋಜಿಸಲಾಗಿದ್ದು, ಮುಖ್ಯ ಅತಿಥಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಶಿಕ್ಷಣ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಗೋಪಾಲ್​ ಎನ್​., ವಿಶೇಷ ಉಪನ್ಯಾಸ ನೀಡುವರು.

ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್​.ಎಂ. ಚಂದ್ರಶೇಖರ ಅತಿಥಿಗಳಾಗಿ ಆಗಮಿಸುವರು. ಮಹಿಳಾ ವಿವಿಯ ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ ಅಧ್ಯಕ್ಷತೆ ವಹಿಸುವರು ಎಂದು ಕಾರ್ಯಕ್ರಮದ ಸಂಯೋಜಕ ಸಂದೀಪ್​ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಟಕದ ನಿರ್ದೇಶಕ ಪ್ರೊ. ಹನುಮಂತಯ್ಯ ಪೂಜಾರಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net