26ರಂದು ವಿಶೇಷ ಮಹಾಶಿವರಾತ್ರಿ ಪೂಜೆ

Bel_Mahashivaratri
Published on

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ತುಳುನಾಡ ಸತ್ಯದ ಸಿರಿಗಳ ಮೂಲ ಆಲಡೆ ಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಡ್ವಾಲ್ ಇಲ್ಲಿ ಫೆ.26ರಂದು ಮಹಾಶಿವರಾತ್ರಿ ಪ್ರಯುಕ್ತವಾಗಿ ದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.

ಬೆಳಗ್ಗೆ ದೇವರಿಗೆ ಏಕಾದಶ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಸಂಜೆ 6ರಿಂದ ಸಾಮೂಹಿಕ ಶಿವ ಪಂಚಾಕ್ಷರಿ ಪಠಣ, ಶ್ರೀ ರಂಗ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net