ಬಂಟ್ವಾಳ ಬಿಲ್ಲವ ಸಂಘಗಳ ವಿಶೇಷ ಸಭೆ

30
Published on

ಬಂಟ್ವಾಳ: ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಗಾಣದಪಡ್ಪು ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಬಿಲ್ಲವ ಸಂಘಗಳ ವಿಶೇಷ ಸಭೆ ಗಾಣದಪಡ್ಪುವಿನಲ್ಲಿ ನಡೆಯಿತು.

ರಾಯಿ ಕೊಲ ಅರಳದ ನಾರಾಯಣಗುರುಗಳ ಜ್ಞಾನಮಂದಿರ ಹಾಗೂ ಸಮುದಾಯ ಭವನ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಶ್ರೀ ಕಾರಿಂಜೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೀರೇಂದ್ರ ಅಮೀನ್ ವಗ್ಗ, ಕೊಲ ಬದನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಅಧ್ಯಕ್ಷ ಜಗದೀಶ್ ಕೊಲ, ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಧ್ಯಕ್ಷ ರಾಘವೇಂದ್ರ ರಾಯಿ ಅವರನ್ನು ಅಭಿನಂದಿಸಲಾಯಿತು. ಬಂಟ್ವಾಳ ತಾಲೂಕು ಸಂಘ ಅಧ್ಯಕ್ಷ ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಂಘ ಉಪಾಧ್ಯಕ್ಷ ಭುವನೇಶ್ ಪಚಿನಡ್ಕ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಪ್ರಧಾನ ಕಾರ್ಯದರ್ಶಿ ರಮೇಶ್ ತುಂಬೆ, ಲೆಕ್ಕಪರಿಶೋಧಕ ಹೇಮಂತ್ ಕುಮಾರ್ ಮೂರ್ಜೆ, ರಾಯಿ ಸಂಘ ಪ್ರತಿಷ್ಠಾಪನಾ ಮಹೋತ್ಸವ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಜೆ.ಎಸ್., ಹೊರೆಕಾಣಿಕೆ ಸಮಿತಿ ಪ್ರಧಾನ ಸಂಚಾಲಕ ಪ್ರಕಾಶ್ ಅಂಚನ್, ರಾಯಿ ಸಂಘ ಅಧ್ಯಕ್ಷ ಶೇಖರ್ ಅಂಚನ್ ಪಿಲ್ಕಾಜೆಗುತ್ತು, ತಾಲೂಕು ಸಂಘ ಮಹಿಳಾ ಅಧ್ಯಕ್ಷೆ ಶೈಲಜಾ ರಾಜೇಶ್, ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಉಪಸ್ಥಿತರಿದ್ದರು. ಬಂಟ್ವಾಳ ತಾಲೂಕು ಸಂಘ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಪ್ರಸ್ತಾವನೆಗೈದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net