

ಮೈಸೂರು: ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ತ್ವರಿತವಾಗಿ ತಲುಪಿಸಲು ಜಿಲ್ಲೆಯಲ್ಲಿ 15 ದಿನಗಳ ಕಾಲ ‘ಕಂದಾಯ ಸೇವೆಗಳ ವಿಶೇಷ ಆಂದೋಲನ’ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮೇ 13 ರಿಂದ 27ರವರೆಗೆ ‘ಕಂದಾಯ ಸೇವೆಗಳ ವಿಶೇಷ ಆಂದೋಲನ’ ಬೆಳಗ್ಗೆ 9.30 ರಿಂದ ಮಧ್ಯಾಹ್ನ 2ರವರೆಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲ ತಹಶೀಲ್ದಾರ್‌ಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಾಕಿ ಇರುವ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳ ಮಾಹಿತಿ ಪಡೆದು ನಂತರ ವೇಳಾಪಟ್ಟಿ ಸಿದ್ಧಪಡಿಸಿಕೊಂಡು ಗ್ರಾಮಗಳಿಗೆ ಭೇಟಿ ನೀಡಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಈ ವಿಶೇಷ ಆಂದೋಲನದಲ್ಲಿ ಆಧಾರ್ ಸೀಡಿಂಗ್, ಎನ್‌ಪಿಸಿಐ, ಫ್ರೂಟ್ಸ್ ಅಪ್ಡೇಷನ್, ಪರಿಹಾರ ಬಾಕಿ ಪಾವತಿ, ಪೌತಿ ಖಾತೆ ಅರ್ಜಿ ಹಾಗೂ ಇನ್ನುಳಿದ ಸಮಸ್ಯೆಗಳಿಗ ಸ್ಥಳದಲ್ಲಿಯೇ ಪರಿಹಾರ ಸೂಚಿಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.