ಪಿ.ಎಂ.ನರೇಂದ್ರಸ್ವಾಮಿ ಜನ್ಮದಿನಕ್ಕೆ ವಿಶೇಷ ಪೂಜೆ: ವಿವಿಧ ದೇವಸ್ಥಾನದಲ್ಲಿ ಧಾರ್ಮಿಕ ಕೈಂಕರ್ಯ

Special Pooja for PM Narendraswamy Birthday Mandya
Published on

ಮಂಡ್ಯ: ಮಳವಳ್ಳಿ ಶಾಸಕ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಅವರ 63ನೇ ಜನ್ಮದಿನದ ಅಂಗವಾಗಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ವಿವಿಧ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

ಪಟ್ಟಣದ ಹೊರವಲಯದ ಮಾರೇಹಳ್ಳಿ ಲಕ್ಷ್ಮೀನರಸಿಂಹಸ್ವಾಮಿ, ಗಂಗಾಧರೇಶ್ವರಸ್ವಾಮಿ ಹಾಗೂ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು. ಈ ಕಾರ್ಯಕ್ರಮಕ್ಕೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕುಟುಂಬ ಸಮೇತ ಆಗಮಿಸಿ ದೇವರಿಗೆ ಪೂಜೆ ಸಲ್ಲಿಸಿದರು. ಜಿಲ್ಲಾಮಟ್ಟದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ತಂದಿದ್ದ ಕೇಕ್ ಅನ್ನು ಮಾರೇಹಳ್ಳಿ ದೇವಸ್ಥಾನದ ಮುಂಭಾಗ ಕತ್ತರಿಸಿ ಜನ್ಮದಿನ ಆಚರಿಸಿಕೊಂಡರು. ಪ್ರವಾಸಿ ಮಂದಿರ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಪಿಎಂಎನ್ ಮಾಲಾರ್ಪಣೆ ಮಾಡಿದರು. ನಂತರ ಗಂಗಾಧರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಕುಟುಂಬ ಸದಸ್ಯರೊಂದಿಗೆ ಸಾರ್ವಜನಿಕರಿಗೆ ಪ್ರಸಾದ ವಿತರಿಸಿದರು. ದಂಡಿನ ಮಾರಮ್ಮ ದೇವಸ್ಥಾನದಲ್ಲಿ ಕಾರ್ಯಕರ್ತ ಪೇಟೆ ಬೀದಿಯ ರವಿ ಅವರು ಹೊತ್ತಿಕೊಂಡಿದ್ದ ಹರಕೆಯನ್ನು 101 ತೆಂಗಿನ ಕಾಯಿ ಹೊಡೆಯುವುದರ ಮೂಲಕ ಶಾಸಕರು ತೀರಿಸಿದರು. ಕಾರ್ಯಕರ್ತರಿಂದ ಪಟ್ಟಣದ ಅನಂತ್ ರಾಂ ವೃತ್ತದ ಬಳಿ ಪಾನಕ ಮಜ್ಜಿಗೆ ವಿತರಿಸಲಾಯಿತು.

ಹಾರ ತುರಾಯಿ, ಪೇಟ, ಶಾಲು ತರಬಾರದೆಂದು ಶಾಸಕರು ಮಾಡಿದ ಮನವಿಗೆ ಸ್ಪಂದಿಸಿದ ಕಾರ್ಯಕರ್ತರು, ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಕೋರಿದರು. ಮತ್ತೊಂದಡೆ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಮಾತನಾಡಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಜನ್ಮದಿನವನ್ನು ಸರಳವಾಗಿ ಆಚರಿಸಬೇಕೆಂಬ ಸೂಚನೆ ಮೇರೆಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಹಾರ ತುರಾಯಿಗಳಿಗೆ ತರುವ ಬದಲು ಮಕ್ಕಳಿಗೆ ನೋಟ್‌ಬುಕ್ ವಿತರಣೆ ಮಾಡಬೇಕು ಎನ್ನುವ ಶಾಸಕರ ಮಾತಿಗೆ ಮನ್ನಣೆ ನೀಡಲಾಗಿದೆ. ಇದರಿಂದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ತುಂಬ ಅನುಕೂಲವಾಗುತ್ತಿದೆ. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಈಗಾಗಲೇ ಸಾವಿರಾರು ಕೋಟಿ ರೂ ಅನುದಾನವನ್ನು ತಂದು ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುತ್ತಿದ್ದಾರೆ. ಅವರಿಗೆ ಇನ್ನಷ್ಟು ಆಯುಷ್ಯ, ಆರೋಗ್ಯ ನೀಡಲೆಂದು ಪ್ರಾರ್ಥಿಸಿದರು.

ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಚಿಕ್ಕಲಿಂಗಯ್ಯ, ಮನ್‌ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಪಿ.ರಾಜು, ದೊಡ್ಡಯ್ಯ, ನಿಕಟಪೂರ್ವ ಅಧ್ಯಕ್ಷ ಕೆ.ಜೆ.ದೇವರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಸಿ.ಚೌಡಯ್ಯ, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅಂಜನಾ ಶ್ರೀಕಾಂತ್, ತಾಲೂಕು ಅಧ್ಯಕ್ಷೆ ಸುಜಾತಾ ಕೆ.ಎಂ.ಪುಟ್ಟು, ಸುಷ್ಮಾ ರಾಜು, ಯುವ ಘಟಕದ ಅಧ್ಯಕ್ಷ ಶ್ರೀಕಾಂತ್, ಮುಖಂಡರಾದ ಬಿ.ಆರ್.ರಾಮಚಂದ್ರು, ಮುಟ್ಟನಹಳ್ಳಿ ಅಂಬರೀಷ್, ಬಿ.ಪುಟ್ಟಬಸವಯ್ಯ, ಎಚ್.ಬಿ.ಬಸವೇಶ್, ಸವಿತಾ, ಸಿ.ಮಾಧು, ಪ್ರಭುಲಿಂಗು, ಪುಟ್ಟಸ್ವಾಮಿ, ಕೃಷ್ಣೇಗೌಡ, ಎಚ್.ಕೆ.ಕೃಷ್ಣಮೂರ್ತಿ, ಪ್ರಮೀಳಾ, ಎಂ.ಎನ್.ಶಿವಸ್ವಾಮಿ, ಸಿ.ಎಂ.ವೇದಮೂರ್ತಿ, ಕುಳ್ಳಚನ್ನಂಕಯ್ಯ, ಶಿವಮಾದೇಗೌಡ, ರೋಹಿತ್ ಗೌಡ(ದೀಪು), ನಂಜುಂಡಸ್ವಾಮಿ, ದಿಲೀಪ್‌ಕುಮಾರ್(ವಿಶ್ವ), ಬಂಕ್ ಮಹದೇವು, ಬಸವರಾಜು, ಗೋಪಾಲ್, ಚೇತನ್‌ನಾಯಕ್, ಶಾಂತರಾಜು, ಸಾಹಳ್ಳಿ ಶಶಿ, ಕೆ.ಎಂ.ಬಾಲು, ಕೃಷ್ಣ, ಡಿ.ಎಂ.ಸುಂದರ್, ಸಂತೋಷ್‌ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net