ಕಾರ್ತಿಕ ಮಾಸದ ಪ್ರಯುಕ್ತ ವಿಶೇಷ ಪೂಜೆ

25M.D.R.2
ಶ್ರೀ ವೈದ್ಯನಾಥೇಶ್ವರ ಸ್ವಾಮಿಗೆ ವಿಶೇಷವಾಗಿ ಅಲಂಕಾರ ಮಾಡಿರುವುದು.
Published on

ಮದ್ದೂರು: ತಾಲೂಕಿನ ವೈದ್ಯನಾಥಪುರ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ವೈದ್ಯನಾಥೇಶ್ವರಸ್ವಾಮಿಯವರ ದೇವಸ್ಥಾನದಲ್ಲಿ ಕಾರ್ತಿಕ ಸೋಮವಾರಗಳಂದು ವಿಶೇಷ ಪೂಜಾ ಕಾರ್ಯಕ್ರ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಪ್ರಸನ್ನ ಪಾರ್ವತಾಂಭ ವೈದ್ಯನಾಥೇಶ್ವರ ಟ್ರಸ್ಟ್ ಅಧ್ಯಕ್ಷ ವಿ.ಟಿ.ಶಿವರಾಜ್ ತಿಳಿಸಿದ್ದಾರೆ.

ಅ. 27, ನ. 3, 10 ಹಾಗೂ 17 ರ ಕಾರ್ತಿಕ ಸೋಮವಾರದಂದು 4 ದಿನಗಳು ದೇಗುಲದಲ್ಲಿ ಮುಂಜಾನೆಯಿಂದಲ್ಲೇ ವಿಶೇಷ ಪೂಜೆ ಹಾಗೂ ಸಹಸ್ರಾರು ಭಕ್ತಾಧಿಗಳಿಗೆ ಅನ್ನ ಸಂರ್ಪಣೆ ಹಮ್ಮಿಕೊಳ್ಳಲಾಗಿದೆ ಹಾಗೂ ಮದ್ದೂರಿನಿಂದ ವೈದ್ಯನಾಥಪುರ ಗ್ರಾಮಕ್ಕೆ ಬರಲು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ವಿಶೇಷ ಬಸ್ ಸೌಲಭ್ಯವನ್ನು ಏರ್ಪಡಿಸಲಾಗಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಶ್ರೀ ಪ್ರಸನ್ನ ಪಾರ್ವತಾಂಭ ವೈದ್ಯನಾಥೇಶ್ವರ ಟ್ರಸ್ಟ್‌ನ ಮಹಾಪೋಷಕರು, ಧರ್ಮದರ್ಶಿಗಳು ಹಾಗೂ ವೈದ್ಯನಾಥಪುರ ಗ್ರಾಮಸ್ಥರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net